ಬಸ್‍ ಡಿಕ್ಕಿ, ಬೈಕ್ ನಲ್ಲಿದ್ದ ಸ್ಥಳದಲ್ಲೇ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

bike--accident

ಯಾದಗಿರಿ,ಆ.18- ಖಾಸಗಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಾಬುರಾವ್ (45), ಅನಿತಾ(40) ಹಾಗೂ ಶುಭಂ (5) ಮೃತಪಟ್ಟ ದುರ್ದೈವಿಗಳೂ.ಬೀದರ್ ಜಿಲ್ಲೆಯ ಬಸವನ ಕಲ್ಯಾಣದಿಂದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಘಣಿಗೆ ದಂಪತಿ ತನ್ನ ಮೊಮ್ಮಗ ಶುಭಂನನ್ನು ಬೈಕ್‍ನಲ್ಲಿ ಕರೆದುಕೊಂಡು ತೆರಳುತ್ತಿದ್ದಾಗ, ಕಲಬುರಗಿ ತಾಲೂಕಿನ ಫರಹತಾಬಾದ್ ಬಳಿ ಆರೆಂಜ್ ಟ್ರಾವೆಲ್ಸ್‍ಗೆ ಸೇರಿದ ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin