ರಾಜಕೀಯ ದುರುದ್ದೇಶದಿಂದ ಬಿಎಸ್‍ವೈ ಮೇಲೆ ಎಫ್ಐಆರ್ ಹಾಕಿಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-vs-Siddaramaiah

ಬಾಗಲಕೋಟೆ, ಆ.18- ಬಿಎಸ್‍ವೈ ಮೇಲೆ ಎಫ್ಐಆರ್ ದಾಖಲು ವಿಚಾರದಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಒಂದೇ. ಡಿ.ಕೆ.ಶಿವಕುಮಾರ್ ಅವರ ಮೇಲೆ ಅವರು ಮಾಡಿದ್ದು ಏನು ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇಲ್ಲಿನ ಅಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿಗೆ ಒಬ್ಬರು ದೂರು ನೀಡಿದ್ದರಿಂದ ಕೇಸು ದಾಖಲಾಗಿ ಯಡಿಯೂರಪ್ಪ ವಿರುದ್ಧ ಕ್ರಮಕೈಗೊಂಡಿದ್ದಾರೆ. ಕಾನೂನು ಪಾಲನೆಯೇ ಬೇಡ ಎಂದರೆ ಹೇಗೆ ಎಂದು ಅವರು ಪ್ರಶ್ನಿಸಿದರು.

ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ ಎಂದು ತಿಳಿಸಿದರು. 2018ರ ಚುನಾವಣೆಯಲ್ಲಿ ಸ್ಪಷ್ಟಬಹುಮತದಿಂದ ನಾವೇ ಅಧಿಕಾರಕ್ಕೆ ಬರುತ್ತೇವೆ. ರಾಜ್ಯದ ಜನತೆ ನಮ್ಮನ್ನು ಒಪ್ಪಿದ್ದಾರೆ. ಏನೇ ತಿಪ್ಪರಲಾಗ ಹಾಕಿದರೂ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರಿಗೆ ಭ್ರಮೆಯಾಗಿದೆ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ಎಂದು ಕುಮಾರಸ್ವಾಮಿ ಹೇಳುತ್ತಾರೆ, ನಿರ್ಣಾಯಕ ಎಂದರೆ ಏನು ಎಂದು ತಿರುಗೇಟುನೀಡಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಹುಲ್‍ಗಾಂಧಿಯವರೊಂದಿಗೆ ಮಾತನಾಡಿದ್ದೇನೆ. ಈಗ ಹೆಸರನ್ನು ಹೇಳುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Facebook Comments

Sri Raghav

Admin