ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಬಾಲಕಿಯರಿಬ್ಬರು ನೀರು ಪಾಲು

ಈ ಸುದ್ದಿಯನ್ನು ಶೇರ್ ಮಾಡಿ

Girls--01

ಬಂಗಾರಪೇಟೆ, ಆ.19- ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಬಾಲಕಿಯರಿಬ್ಬರು ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ತಾಲ್ಲೂಕಿನ ಕಾಬಲಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ನಂದವೇಣಿ (17) ಹಾಗೂ ಕಲ್ಯಾಣಿ (16). ಇಬ್ಬರು ಇಂದು ಮುಂಜಾನೆ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ದಾರಿಹೋಕರು ಬಟ್ಟೆ , ಚಪ್ಪಲಿ ದಂಡೆಯಲ್ಲಿರುವುದನ್ನು ಕಂಡು ಅನುಮಾನಗೊಂಡು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡು ನಂದವೇಣಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಕಲ್ಯಾಣಿಯ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

ಮಾರಿಕುಪ್ಪಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  ಇನ್ನೊಂದು ಮೂಲದ ಪ್ರಕಾರ ಈ ಬಾಲಕಿಯರು ನಿನ್ನೆ ರಾತ್ರಿಯೇ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ತನಿಖೆಯ ನಂತರ ನಿಖರ ಮಾಹಿತಿ ಹೊರ ಬರಬೇಕಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin