ತುಮಕೂರಲ್ಲಿ ಕೌಶಲ್ಯ ತರಬೇತಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Tumakuru--01

ತುಮಕೂರು, ಆ.19-ಎಚ್‍ಎಂಎಸ್ ಕಾಲೇಜಿನಲ್ಲಿ ರಾಜ್ಯ ಸರ್ಕಾರ ಆರಂಭಿಸಿರುವ ಕೌಶಲ್ಯ ತರಬೇತಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ತುಮಕೂರಿನ ಎಚ್‍ಎಂಎಸ್ ಐಟಿ ಕಾಲೇಜಿನಲ್ಲಿ ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪನವರು ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೌಶಲ್ಯ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಎಚ್‍ಎಂಎಸ್ ಐಟಿ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕೇಂದ್ರವನ್ನು ಆರಂಭಿಸಿದ್ದು, ಅದಕ್ಕೆ ಅಧಿಕೃತ ಚಾಲನೆ ದೊರೆತಿದೆ ಎಂದರು.
ಕಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ರೋಷನ್‍ಬೇಗ್, ಡಿ.ಕೆ.ಶಿವಕುಮಾರ್, ಶಾಸಕರಾದ ರಫೀಕ್ ಅಹಮ್ಮದ್, ಕೆ.ಎನ್.ರಾಜಣ್ಣ, ಮಾಜಿ ಶಾಸಕರಾದ ಶಫಿ ಅಹಮ್ಮದ್, ಜಿಲ್ಲಾಧ್ಯಕ್ಷ ರಾಮಕೃಷ್ಣ, ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೌಶಲ್ಯ ತರಬೇತಿ ಕೇಂದ್ರದ ಉದ್ದೇಶ ರಾಜ್ಯಾದ್ಯಂತ ಇರುವ ಸರ್ಕಾರಿ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿರುವ ವಿದ್ಯಾರ್ಥಿಗಳನ್ನು ಹೆಚ್ಚು ಕ್ರಿಯಾಶೀಲತೆಯ ತರಬೇತಿಗೆ ಒಳಪಡಿಸಿ ಅವರನ್ನು ತಯಾರು ಮಾಡುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಎಲ್ಲ ಸರ್ಕಾರಿ-ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ತೆರೆಯಲು ಸರ್ಕಾರ ಆದೇಶಿಸಿದೆ.

ವೃತ್ತಿ ಮಾರ್ಗದರ್ಶನ, ಸಂವಹನ, ಕಲೆ, ವ್ಯಕ್ತಿತ್ವ ವಿಕಸನ, ಕಂಪ್ಯೂಟರ್ ತರಬೇತಿ, ಮೌಲ್ಯ ಶಿಕ್ಷಣ ಹಾಗೂ ಸಮಾಲೋಚನೆ ಭಾರತೀಯ ಸೇವೆಯಲ್ಲಿ ಕನ್ನಡಿಗರು ಕಾರ್ಯಕ್ರಮದಡಿ ಸೇವಾ ನೇಮಕಾತಿ ಪೂರ್ವ ತರಬೇತಿ, ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಮುಂದಾಗಿದೆ.
ಜಪಾನ್, ಅಮೆರಿಕಾ, ರಷ್ಯಾ ಸೇರಿದಂತೆ ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಇದನ್ನು ರಾಜ್ಯದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದು.

Facebook Comments

Sri Raghav

Admin