ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ವಾಟಾಳ್ ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ಚಾಮರಾಜನಗರ, ಆ.19- ಚಾಮರಾಜನಗರ-ಮೆಟ್ಟುಪಾಳ್ಯ ರೈಲ್ವೆ ಯೋಜನೆ ಕಡೆಗಣಿಸಿರುವುದನ್ನು ವಿರೋಧಿಸಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ರೈಲ್ವೆ ನಿಲ್ದಾಣದ ಬಳಿ ಈ ಯೋಜನೆ ಕಡೆಗಣನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ನುಗ್ಗುವ ಪ್ರಯತ್ನ ನಡೆಸಿದ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಮೆಟ್ಟುಪಾಳ್ಯ-ಚಾಮರಾಜನಗರ ರೈಲ್ವೆ ಯೋಜನೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಸಂಸದರು ಈ ಬಗ್ಗೆ ಸಂಸತ್‍ನಲ್ಲಿ ದನಿ ಎತ್ತಿ ಈ ಯೋಜನೆ ಜಾರಿಗೆ ಒತ್ತಾಯಿಸಿದರೆ ಚಾಮರಾಜನಗರ ಜನರಿಗೆ ಅನುಕೂಲವಾಗುತ್ತದೆ.ಆದರೆ, ನಮ್ಮ ಸಂಸದರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.  ಯೋಜನೆ ಜಾರಿಗೆ ಆಗ್ರಹಿಸಿ ನಿರಂತರ ಹೋರಾಟ ನಡೆಸುತ್ತಿದ್ದೇವೆ. ಸಂಸದರು ಈ ಯೋಜನೆ ಜಾರಿ ಬಗ್ಗೆ ಕಾಳಜಿ ವಹಿಸಲಿ ಎಂದು ಅವರು ಆಗ್ರಹಿಸಿದರು.

Facebook Comments

Sri Raghav

Admin