ವಿಚಾರಣೆಗೆ ಹಾಜರಾಗಲು ಹತ್ತು ದಿನಗಳ ಕಾಲಾವಕಾಶ ಕೋರಿದ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಬೆಂಗಳೂರು, ಆ.19-ಶಿವರಾಮಕಾರಂತ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಹತ್ತು ದಿನಗಳ ಕಾಲಾವಕಾಶ ಕೋರಿದ್ದಾರೆ. ಶಿವರಾಮಕಾರಂತ ಬಡಾವಣೆಯಲ್ಲಿ 257 ಎಕರೆ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಅಧಿಕಾರಿಗಳು ನಿನ್ನೆಯೇ ಸಮನ್ಸ್ ನೀಡಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪರ ವಕೀಲರು ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿದ್ದಾರೆ.  ನಿಮ್ಮ ಸಮನ್ಸ್‍ನಲ್ಲಿ ಹಲವಾರು ದಾಖಲೆಗಳ ಉಲ್ಲೇಖವಿದೆ. ಆದರೆ ಪ್ರಕರಣ ಸಂಬಂಧ ನನಗೆ ನೀವು ಯಾವ ದಾಖಲಾತಿ ನೀಡಿಲ್ಲ. ಹಾಗಾಗಿ ದಾಖಲಾತಿಗಳ ಸಂಗ್ರಹಕ್ಕೆ ಕನಿಷ್ಠ 10 ದಿನಗಳ ಸಮಯಾವಕಾಶ ಬೇಕಾಗಿದೆ. ಆರ್‍ಟಿಐ ಮೂಲಕ ಸಂಬಂಧಿಸಿದ ಇಲಾಖೆಗಳಿಂದ ದಾಖಲೆ ಸಂಗ್ರಹಿಸಬೇಕಾಗಿದೆ. ದಾಖಲಾತಿಗಳ ಸಂಗ್ರಹದ ಬಳಿಕ ನಿಮ್ಮ ಮುಂದೆ ಹಾಜರಾಗಿ ಪ್ರಕರಣ ಸತ್ಯಾಸತ್ಯತೆಯನ್ನು ತಮ್ಮ ಮುಂದಿಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಹೈಕೋರ್ಟ್ ಮೊರೆ: ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪನವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಸೋಮವಾರ ಬರಲಿದೆ.

Facebook Comments

Sri Raghav

Admin