ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್, ಬಿಎಸ್ವೈ ವಿರುದ್ಧ ಎಸಿಬಿ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಬೆಂಗಳೂರು, ಆ.20-ಶಿವರಾಮಕಾರಂತ ಬಡಾವಣೆ ಸಂಬಂಧ ಅಕ್ರಮ ಡಿ ನೋಟಿಫಿಕೇಷನ್ ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಆರೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ವಿರುದ್ಧ ಎಸಿಬಿ ಎಫ್‍ಐಆರ್ ದಾಖಲಿಸಿದೆ. ಎಸಿಬಿಯನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ 102ನೆ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಬಳಿಯಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಎಸಿಬಿ ಅಧಿಕಾರಿಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಕಿಡಿಕಾರಿದರು.

ಅಕ್ರಮ ಡಿ ನೋಟಿಫೀಕೇಷನ್ ಬಗ್ಗೆ ಮೇಲ್ನೋಟಕ್ಕೆ ಆರೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಾರೆಂದರೆ ಏನು ಹೇಳಬೇಕು. ಕಾನೂನು ತನ್ನ ಕೆಲಸ ಮಾಡಲೇಬಾರದೇ. ಬಿಜೆಪಿ ನಡೆಸುತ್ತಿರುವ ಇಂತಹ ಹೋರಾಟಕ್ಕೆ ಮನ್ನಣೆ ಸಿಗುವುದಿಲ್ಲ.ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ಏನೆನ್ನಬೇಕು ಎಂದು ತಿರುಗೇಟು ನೀಡಿದರು.

Facebook Comments

Sri Raghav

Admin