2014ರ ನಂತರ 27 ರೈಲು ದುರಂತ, 259 ಸಾವು, 899 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Train-Accidnt

ನವದೆಹಲಿ, ಆ.20- 2014 ನಂತರ ದೇಶದ ವಿವಿಧೆಡೆ 27 ರೈಲು ದುರಂತಗಳ ಸಂಭವಿಸಿದ್ದು, 529 ಮಂದಿ ಮೃತಪಟ್ಟಿದ್ದಾರೆ. ಈ ಅಪಘಾತಗಳಲ್ಲಿ 899 ಜನರು ಗಾಯಗೊಂಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅಂಕಿ -ಅಂಶ ನೀಡಿದ್ದಾರೆ. ಈ ಸಾಂಖ್ಯಿಕ ಮಾಹಿತಿಗಳ ವಿವರಗಳನ್ನು ಟ್ವೀಟ್ ಮಾಡಿರುವ ಅವರು, ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ. ಉನ್ನತ್ ಎಕ್ಸ್‍ಪ್ರೆಸ್‍ನಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಸುರ್ಜೆವಾಲಾ, ರೈಲು ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ನೊಂದು ನುಡಿದಿದ್ದಾರೆ.

ರೈಲು ಅಪಘಾತಗಳನ್ನು ತಡೆಗಟ್ಟಲು ನೀವುಯಾವ ಕ್ರಮಗಳನ್ನು ಕೈಗೊಳ್ಳುತ್ತಿದ್ದೀರಿ. ದುರಂತಗಳು ಮರುಕಳಿಸದಂತೆ ತಡೆಯಲು ಸರ್ಕಾರ ಸಾಕಷ್ಟು ಮುಂಜಾಗ್ರತೆ ಮತ್ತು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವುದು ಯಾವಾಗ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

Facebook Comments

Sri Raghav

Admin