ಅನುಚಿತವಾಗಿ ವರ್ತಿಸಿದ ಪಿ.ಟಿ.ರಮೇಶ್ ಅಮಾನತ್ತಿಗೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Kodagu--01

ಬೆಂಗಳೂರು, ಆ.21-ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ರೇಷ್ಮೆ ಮಂಡಳಿ ಅಧ್ಯಕ್ಷ ಪಿ.ಟಿ.ರಮೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಆಗ್ರಹಿಸಿದ್ದಾರೆ. ಅಂದು ವೇದಿಕೆಯಲ್ಲಿ ಪಿ.ಟಿ.ರಮೇಶ್ ಅನುಚಿತವಾಗಿ ವರ್ತಿಸಿದ್ದು, ನನಗೂ ಸಹ ಮುಜುಗರ ತಂದಿದೆ.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದಿದ್ದೇನೆ. ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಹೇಳಿದರು. ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅವರು ಈಗಾಗಲೇ ರಾಜೀನಾಮೆ ನೀಡಬೇಕಾಗಿತ್ತು. ಈವರೆಗೂ ರಾಜೀನಾಮೆ ನೀಡಿಲ್ಲ ಎಂದು ಸಚಿವರು ತಿಳಿಸಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಆಯ್ಕೆಯ ಪಕ್ಷ ..?

View Results

Loading ... Loading ...
Facebook Comments

Sri Raghav

Admin