ಅರಣ್ಯಾಧಿಕಾರಿ ವಾಹನದ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ,ಆ.21-ಅರಣ್ಯ ಇಲಾಖೆ ವಾಹನದ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು ಅಧಿಕಾರಿಗಳ ಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಇದ್ದಕ್ಕಿದಂತೆ ಯದ್ವಾತದ್ವಾ ಗುಂಡು ಹಾರಿಸಿದ್ದಾರೆ. ಆದರೆ ಅದೃಷ್ಟವಶಾತ್ ವಾಹನದಲ್ಲಿದ್ದ ಕಿರಣ್ ರಾಜಪ್ಪ ಮತ್ತು ಹಜರತ್ ಪಾಷಾ ಹಾಗೂ ಮತ್ತೊಬ್ಬರು ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

ಈ ಕೃತ್ಯ ಎಸಗಿರುವ ಗ್ಯಾಂಗ್‍ನಲ್ಲಿ ಇದ್ದವರು ಯಾರು ಮತ್ತು ಏತಕ್ಕಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂಬುದು ತಿಳಿದುಬಂದಿಲ್ಲ. ಅರಣ್ಯ ಸಂರಕ್ಷಣೆಗಾಗಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿಯ ವಾಹನದ ಮೇಲೆ ಈ ದಾಳಿ ನಡೆದಿರುವುದು ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಗುಂಡಿನ ದಾಳಿಯಲ್ಲಿ ವಾಹನ ಜಖಂ ಆಗಿದೆಯಾದರೂ ಸಿಬ್ಬಂದಿ ಪಾರಾಗಿರುವುದು ಪವಾಡವೇ ಸರಿ ಎಂದು ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin