ಜಂತಕಲ್ ಗಣಿ ಲಂಚ ಪ್ರಕರಣ : ಎಸ್‍ಐಟಿ ಎದುರು ಹಾಜರಾದ ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

HD-Kumaraswamy

ಬೆಂಗಳೂರು, ಆ.21- ಜಂತಕಲ್ ಗಣಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಇಂದು ವಿಶೇಷ ತನಿಖಾ ತಂಡ (ಎಸ್‍ಐಟಿ)ದ ಎದುರು ಹಾಜರಾದರು.ಇಂದು ಬೆಳಗ್ಗೆ ಹೆಬ್ಬಾಳದಲ್ಲಿರುವ ಎಸ್‍ಐಟಿ ಕಚೇರಿಗೆ ತೆರಳಿದ ಕುಮಾರಸ್ವಾಮಿ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕುಮಾರಸ್ವಾಮಿ ಎಸ್‍ಐಟಿ ಅಧಿಕಾರಿಗಳ ಎದುರು ಹಾಜರಾಗುತ್ತಿರುವುದು ಇದು ಎರಡನೆ ಬಾರಿ.

ಜಂತಕಲ್ ಗಣಿ ಪರವಾನಗಿ ಅಕ್ರಮ ಪುನರ್ ನವೀಕರಣಕ್ಕಾಗಿ 150 ಕೋಟಿ ರೂ. ಲಂಚ ಪಡೆಯಲಾಗಿದೆ ಎಂಬ ಆರೋಪವನ್ನು ಎಚ್.ಡಿ.ಕುಮಾರಸ್ವಾಮಿ ಎದುರಿಸುತ್ತಿದ್ದಾರೆ. ಈ ಕುರಿತಂತೆ ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿದ್ದು, ಮತ್ತೆ ಎರಡನೆ ಬಾರಿ ಇಂದು ಕೂಡ ವಿಚಾರಣೆ ನಡೆಸಿದೆ.

ನನ್ನ ವರ್ಚಸ್ಸು ಹಾಳು ಮಾಡಲು ಸುಳ್ಳು ಕೇಸು: ಎಚ್‍ಡಿಕೆ

ಬೆಂಗಳೂರು, ಆ.21-ರಾಜಕೀಯದಲ್ಲಿ ತನ್ನ ವರ್ಚಸ್ಸನ್ನು ಹಾಳು ಮಾಡಲು ಸುಳ್ಳು ಕೇಸು ಹಾಕಿ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಕೋರ್ಟ್ ಆದೇಶದಂತೆ ಎಸ್‍ಐಟಿ ತನಿಖಾ ಸಂಸ್ಥೆಗೆ ಹಾಜರಾಗಿದ್ದೇನೆ. ರಾಜಕೀಯ ಪ್ರೇರಿತದಿಂದ ನನ್ನ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ನನ್ನ ಇಮೇಜ್ ಹಾಳು ಮಾಡಲು ಕೆಲವರು ಕುತಂತ್ರ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಸುಮ್ಮನಿರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜಂತಕಲ್ ಮೈನಿಂಗ್ ಪ್ರಕರಣ ಹತ್ತು ವರ್ಷ ಹಳೆಯದು. ಈ ಪ್ರಕರಣವನ್ನು ಜೀವಂತವಾಗಿಡಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಹೇಳಿದರು. ಇತ್ತೀಚಿನ ರಾಜ್ಯದ ವಿದ್ಯಮಾನಗಳ ಬಗ್ಗೆ ಸುದೀರ್ಘ ಮಾತನಾಡಬೇಕು. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಇದ್ದರೂ ಈ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳು ಚರ್ಚೆ ಮಾಡುತ್ತಿಲ್ಲ. ಅಧಿಕಾರದ ಆಸೆಗಾಗಿ ಹಾಗೂ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳಲು ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ಪ್ರತಿದಿನ ಐವರು ರೈತರು ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ಎಷ್ಟು ಡೋಂಗಿ ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಆಯ್ಕೆಯ ಪಕ್ಷ ..?

View Results

Loading ... Loading ...
Facebook Comments

Sri Raghav

Admin