ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ : ಸಿ.ಎಂ.ಇಬ್ರಾಹಿಂ

ಈ ಸುದ್ದಿಯನ್ನು ಶೇರ್ ಮಾಡಿ

CM-Ibrahim--01

ಬೆಂಗಳೂರು, ಆ.21- ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರು ನನಗೆ ಜವಾಬ್ದಾರಿ ವಹಿಸಿದ್ದಾರೆ. ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಇಂದು ಮೇಲ್ಮನೆಗೆ ನಾಮಪತ್ರ ಸಲ್ಲಿಸಿದ ಸಿ.ಎಂ.ಇಬ್ರಾಹಿಂ ಹೇಳಿದರು. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಈ ಜವಾಬ್ದಾರಿಯನ್ನು ನೀಡಿದೆ. ಅದನ್ನು ನಿಭಾಯಿಸುತ್ತೇನೆ. ಜತೆಗೆ ಪಕ್ಷ ಸಂಘಟಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‍ಅನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತೇವೆ ಎಂದು ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಈ ಹುದ್ದೆ ನೀಡಿರುವುದೇ ತೃಪ್ತಿ ತಂದಿದೆ ಎಂದು ಹೇಳಿದ ಅವರು, ಯಾವುದೇ ಅಧಿಕಾರ ನೀಡಿಲ್ಲ ಎಂಬ ಭಾವನೆಯಿತ್ತು. ಈಗ ವಿಧಾನಪರಿಷತ್‍ಗೆ ಆಯ್ಕೆ ಮಾಡುತ್ತಿದ್ದಾರೆ. ಇದು ಸಂತಸ ತಂದಿದೆ ಎಂದು ಹೇಳಿದರು.

Facebook Comments

Sri Raghav

Admin