ಪರಿಷತ್‍ ಉಪಚುನಾವಣೆಗೆ ಕಾಂಗ್ರೆಸ್’ನಿಂದ ಇಬ್ರಾಹಿಂ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

CM-Ibrahinm

ಬೆಂಗಳೂರು, ಆ.21- ವಿಧಾನ ಸಭೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಒಂದು ಸ್ಥಾನದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಎಂ.ಇಬ್ರಾಹಿಂ ಅವರು ಇಂದು ನಾಮಪತ್ರ ಸಲ್ಲಿಸಿದರು. ಸೂಚಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ಉಪಸಭಾಧ್ಯಕ್ಷ ಶಿವಶಂಕರರೆಡ್ಡಿ, ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್, ಶಾಸಕರಾದ ಕಳಲೆ ಕೇಶವಮೂರ್ತಿ, ಮುನಿರತ್ನ, ಬಿ.ಜಿ.ಗೋವಿಂದಪ್ಪ, ಷಡಕ್ಷರಿ, ಎನ್.ವೈ.ಗೋಪಾಲಕೃಷ್ಣ, ಡಾ.ಕೆ.ಸುಧಾಕರ್ ಅವರು ಸಹಿ ಹಾಕಿದರು.

ವಿಮಲಾಗೌಡ ಅವರ ನಿಧನದಿಂದ ತೆರವಾಗಿರುವ ಈ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಚುನಾವಣೆಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಬಹುತೇಕ ಸಿ.ಎಂ.ಇಬ್ರಾಹಿಂ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.  10 ತಿಂಗಳ ಅವಧಿಗೆ ಮಾತ್ರ ಈ ಚುನಾವಣೆ ನಡೆಯಲಿದ್ದು, ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಂತರ ಚುನಾವಣಾಧಿಕಾರಿಗಳು ಅಭ್ಯರ್ಥಿ ಆಯ್ಕೆಯನ್ನು ಘೋಷಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎನ್.ಎ.ಹ್ಯಾರಿಸ್, ದಿನೇಶ್ ಗುಂಡೂರಾವ್, ಭೈರತಿ ಬಸವರಾಜ್, ಎಂ.ಡಿ.ಲಕ್ಷ್ಮಿನಾರಾಯಣ್ ಮುಂತಾದವರು ಈ ಸಂದರ್ಭದಲ್ಲಿದ್ದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಆಯ್ಕೆಯ ಪಕ್ಷ ..?

View Results

Loading ... Loading ...
Facebook Comments

Sri Raghav

Admin