ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಮಾಧ್ಯಮ ಸಲಹೆಗಾರ ಪ್ರಸಾದ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

PV-01

ಹೈದರಾಬಾದ್, ಆ.21-ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಪಿ.ವಿ.ಆರ್.ಕೆ. ಪ್ರಸಾದ್ ಇಂದು ಮುಂಜಾನೆ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಹೈದರಾಬಾದ್‍ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟರು ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಆಂಧ್ರಪ್ರದೇಶ ಕೇಡರ್‍ನ ಐಎಎಸ್ ಅಧಿಕಾರಿಯಾಗಿದ್ದ ಅವರು, ತಮ್ಮ ಸೇವಾವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನದ(ಟಿಟಿಡಿ) ಕಾರ್ಯನಿರ್ವಹಣಾ ಅಧಿಕಾರಿ ಮತ್ತು ವೈಜಾಗ್ ಪೋರ್ಟ್ ಟ್ರಸ್ಟ್‍ನ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವಾರು ಮಹತ್ವದ ಜವಾಬ್ಧಾರಿಗಳನ್ನು ನಿರ್ವಹಿಸಿದ್ದರು.
ಪ್ರಸಾದ್ ನಿಧನಕ್ಕೆ ತೆಲಂಗಾಣ ರಾಜ್ಯಪಾಲ ಇ.ಎಸ್.ಎಲ್.ನರಸಿಂಹನ್ ಮತ್ತು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin