ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

ಈ ಸುದ್ದಿಯನ್ನು ಶೇರ್ ಮಾಡಿ

Girl

ಚಿತ್ರದುರ್ಗ, ಆ.21- ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕೇರಳ ಮೂಲದ ಮೃದುಲಗ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿ. ಈಕೆ ಕೇರಳ ಮೂಲದವಳಾಗಿದ್ದು, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿನ್ನೆ ರಾತ್ರಿ ಹಾಸ್ಟೆಲ್‍ನ 2ನೆ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಈಕೆ ಗಂಭೀರ ಗಾಯಗೊಂಡಿದ್ದಾಳೆ. ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Facebook Comments

Sri Raghav

Admin