ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‍ಆರ್‍ಟಿಸಿಯಿಂದ 27ರವೆಗೆ ವಿಶೇಷ ಸಾರಿಗೆ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

KSRTC01

ಬೆಂಗಳೂರು, ಆ.22- ಗೌರಿ-ಗಣೇಶ ಹಬ್ಬದ ಪ್ರಯುಕ್ತ ನಾಳೆಯಿಂದ ಆ.27ರವರೆಗೆ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಕೆಎಸ್‍ಆರ್‍ಟಿಸಿ ವತಿಯಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಶಿವಮೊಗ್ಗ, ಹಾಸನ, ಮಂಗಳೂರು, ಶೃಂಗೇರಿ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು, ಕಾರವಾರ ಸೇರಿದಂತೆ ಹಲವು ಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ksrtc

ಸ್ಯಾಟಲೈಟ್ ಬಸ್‍ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಮಡಿಕೇರಿ ಕಡೆಗೆ. ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತಿರುಪತಿ, ಹೈದರಾಬಾದ್ ಸೇರಿದಂತೆ ಮತ್ತಿತರ ಕಡೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‍ಗೆ www.ksrtc.in ವೆಬ್‍ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ನಗರದಲ್ಲಿರುವ 115 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 301 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಶೇ.5ರಷ್ಟು ರಿಯಾಯ್ತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯ್ತಿ ನೀಡಲಾಗುವುದು.

KSRTC--012

Facebook Comments

Sri Raghav

Admin