ನಡು ರಸ್ತೆಯಲ್ಲೇ ರೌಡಿ ಟ್ಯಾಬ್ಲೆಟ್ ರಘು ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Murder

ಕನಕಪುರ, ಆ.22- ಗುಂಪೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ರೌಡಿಯನ್ನು ಬರ್ಬರವಾಗಿ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ರವಿ ಅಲಿಯಾಸ್ ಟ್ಯಾಬ್ಲೆಟ್ ರಘು ಕೊಲೆಯಾದ ರೌಡಿ.  ತಡರಾತ್ರಿ ರವಿ 100 ಅಡಿ ರಸ್ತೆಯ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಗುಂಪು ಮಾರಕಾಸ್ತ್ರಗಳೊಂದಿಗೆ ಏಕಾಏಕಿ ದಾಳಿ ಮಾಡಿ ರವಿ ತಲೆ, ಮುಖ ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

ಸುದ್ದಿ ತಿಳಿದ ತಲಘಟ್ಟಪುರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೂರು ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ರವಿ ಭಾಗಿಯಾಗಿದ್ದನು ಎನ್ನಲಾಗಿದೆ. ವಜ್ರೇಶ್ ಗುಂಪಿನಿಂದ ಈ ಕೊಲೆ ನಡೆದಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

Facebook Comments

Sri Raghav

Admin