ಮುಸ್ಲಿಂ ಮಹಿಳೆಯರ ಗೆಲುವು, ಸುಪ್ರೀಂ ತೀರ್ಪಿಗೆ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Women--01

ಲಕ್ನೊ, ಆ.22- ತ್ರಿವಳಿ ತಲಾಖ್ ಅಕ್ರಮ ಕಾನೂನು ಬಾಹೀರ ಮತ್ತು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ದೇಶಾದ್ಯಂತ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಮುಸ್ಲಿಂ ಮಹಿಳೆಯರಿಗೆ ಈ ತೀರ್ಪಿನಿಂದ ನೆಮ್ಮದಿಯ ಬದುಕು ಸಾಗಿಸಲು ನೆರವಾಗಲಿದೆ ಎಂದು ಹೇಳಿದೆ. ಅಖಿಲ ಭಾರತ ಮುಸ್ಲಿಂ ಮಹಿಳೆಯರ ವೈಯಕ್ತಿಕ ಕಾನೂನು ಮಂಡಳಿ (ಎಐಎಂಡಬ್ಯೂಪಿಎಲ್‍ಬಿ) ಮತ್ತು ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿ ಸ್ವಾಗತಿಸಿದೆ.

ಇದು ದೇಶದ ಇಸ್ಲಾಂ ಮತ್ತು ಮುಸ್ಲಿಂ ಮಹಿಳೆಯರಿಗೆ ಸಂದ ಗೆಲುವಾಗಿದೆ ಎಂದು ಈ ಎರಡೂ ಮಂಡಳಿಗಳು ಬಣ್ಣಿಸಿವೆ. ಸುಪ್ರೀಂಕೋರ್ಟ್‍ನ ಈ ತೀರ್ಪಿನಿಂದ ಮುಸ್ಲಿಂ ಮಹಿಳೆಯರ ಬದುಕಿನಲ್ಲಿ ಭರವಸೆಯ ಹೊಸ ಬೆಳಕು ಮೂಡಿದೆ ಎಂದು ಮಂಡಳಿಗಳ ಮುಖ್ಯಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

Facebook Comments

Sri Raghav

Admin