ಮೇಲ್ಮನೆಗೆ ಸದಸ್ಯರಾಗಿ ಸಿ.ಎಂ.ಇಬ್ರಾಹಿಂ ಅವಿರೋಧ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

CM-Ibrahim--01

ಬೆಂಗಳೂರು, ಆ.22-ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆದ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ತಟಸ್ಥವಾಗಿ ಉಳಿದ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರು ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಲು ದಾರಿ ಸುಗಮವಾಯಿತು.

ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ವಿಧಾನಪರಿಷತ್ತಿನ ಮಾಜಿ ಉಪಸಭಾಪತಿ ವಿಮಲ್‍ಗೌಡ ಅವರ ನಿಧನದಿಂದ ಈ ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯಬೇಕಿತ್ತು. ಆದರೆ ಪ್ರತಿಸ್ಪರ್ಧಿಗಳು ಯಾರೂ ಇರಲಿಲ್ಲವಾದ್ದರಿಂದ ಸಿ.ಎಂ.ಇಬ್ರಾಹಿಂ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

CM-Ibrahinm

Facebook Comments

Sri Raghav

Admin