ಸಾಲಬಾಧೆ ಮತ್ತು ಆಸ್ತಿ ವಿವಾದದಿಂದ ನೊಂದ ದಂಪತಿ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Family-Suicide--01

ಬೆಂಗಳೂರು,ಆ.22- ಸಾಲಬಾಧೆ ಮತ್ತು ಆಸ್ತಿ ವಿವಾದದಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಮಾವಳ್ಳಿಯ ಪಾಪಯ್ಯ ಸ್ಟ್ರೀಟ್ ನಿವಾಸಿಗಳಾದ ನಂಜುಂಡ ಸ್ವಾಮಿ(48) ಹಾಗೂ ಪುಷ್ಪಲತಾ (42) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ನಿನ್ನೆ ರಾತ್ರಿ 9ರಿಂದ 10 ಗಂಟೆ ಸುಮಾರಿನಲ್ಲಿ ಮನೆಯಲ್ಲಿ ಒಂದೇ ಫ್ಯಾನ್‍ಗೆ ಎರಡು ಸೀರೆಗಳಿಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರು ನೋಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಆತ್ಮಹತ್ಯೆಗೂ ಮೊದಲು ದಂಪತಿ ಡೆತ್‍ನೋಟ್ ಬರೆದಿಟ್ಟಿದ್ದಾರೆ.

ದಂಪತಿ ಚಿಕ್ಕ ಮಾವಳ್ಳಿಯಲ್ಲಿ ಬಿರಿಯಾನಿ ಹೋಟೇಲ್ ನಡೆಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸಾಲಬಾಧೆ ಮತ್ತು ಆಸ್ತಿ ವಿವಾದದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ಕಲಾಸಿಪಾಳ್ಯ ಪೊಲೀಸರು ಡೆತ್‍ನೋಟ್ ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin