27,000 ಕೋಟಿ ರೂ. ಮೊತ್ತದ 9,500 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi UN

ನವದೆಹಲಿ, ಆ.22-ಪ್ರಧಾನಿ ನರೇಂದ್ರ ಮೋದಿ ಆ.29ರಂದು ರಾಜಸ್ತಾನದ ಉದಯ್‍ಪುರ್‍ನಲ್ಲಿ 27,000 ಕೋಟಿ ರೂ. ಮೊತ್ತದ 9,500 ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪಿಎಂಜಿಎಸ್‍ವೈ ಯೋಜನೆ ಅಡಿ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಮತ್ತು ಗ್ರಾಮೀಣ ರಸ್ತೆಗಳು ಮತ್ತು ರಾಜ್ಯದ ಮಹತ್ವದ ಯೋಜನೆಗಳೂ ಇದರಲ್ಲಿ ಸೇರಿವೆ.

ವಿವಿಧ ಅಭಿವೃದ್ದಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ ನಂತರ ಉದಯ್‍ಪುರ್‍ನ ಖೇಲ್‍ಗಾಂವ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ಭೂಸಾರಿಗೆ ಸಚಿವ ನಿತೀನ್ ಗಡ್ಕರಿ ಭಾಗವಹಿಸಲಿದ್ದಾರೆ. ರಾಜಸ್ತಾನದಲ್ಲಿ 15,000 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮರುಭೂಮಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಮೋದಿ ಪೂರ್ಣಗೊಂಡ 873 ಕಿ.ಮೀ.ಗಳ 11 ರಾಷ್ಟ್ರೀಯ ಹೆದ್ದಾರಿಗಳನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ.

Facebook Comments

Sri Raghav

Admin