ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ : ಸಿದ್ದರಾಮಯಯ್ಯ ನಿರ್ದೋಷಿ

ಈ ಸುದ್ದಿಯನ್ನು ಶೇರ್ ಮಾಡಿ

Clean-Chit--01

ಬೆಂಗಳೂರು, ಆ.23-ತೀವ್ರ ಕುತೂಹಲ ಕೆರಳಿಸಿದ್ದ ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ನ್ಯಾ.ಕೆಂಪಣ್ಣ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಸುಮಾರು 1861 ಪುಟಗಳ ವರದಿಯನ್ನು ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಠಿಆ ಅವರಿಗೆ ಸಲ್ಲಿಸಲಾಗಿದ್ದು, ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಮೀರಿ ಯಾವುದೇ ರೀತಿಯಲ್ಲೂ ಲೋಪ ಎಸಗಿಲ್ಲ ಎಂದು ತಿಳಿಸಲಾಗಿದೆ.

ಡಿ ನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿನ ಕೆಲವು ಅಧಿಕಾರಿಗಳು ಲೋಪ ಮಾಡಿರುವುದನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 10 ಸಾವಿರ ಕೋಟಿ ರೂ.ಗಳ ಹಗರಣ ಇದಾಗಿದ್ದು, ಈ ಹಿಂದೆ ಸದನದ ಒಳಗೆ ಹಾಗೂ ಹೊರಗೆ ಭಾರೀ ಚರ್ಚೆ ನಡೆದಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದರು.

ಇಂದು ವರದಿ ನೀಡಿದ ನಂತರ ಮಾತನಾಡಿದ ನ್ಯಾಯಮೂರ್ತಿ ಕೆಂಪಣ್ಣ ಅವರು, ಸುಮಾರು ಐದು ವಿಷಯಗಳಿಗೆ ಸಂಬಂಧಿಸಿದಂತೆ ನಮಗೆ ವರದಿ ನೀಡಲು ಸೂಚನೆ ನೀಡಿದ್ದರು. ಬಂದ ದೂರುಗಳ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ವಿಚಾರಣೆ ನಡೆಸಿ ಇಂದು ನನ್ನ ಕಾರ್ಯ ಮುಗಿಸಿದ್ದೇನೆ. ಮುಂದಿನ ತೀರ್ಮಾನ ಸರ್ಕಾರದ್ದು ಎಂದು ತಿಳಿಸಿದರು. ಮೊದಲು ಆರು ತಿಂಗಳು ಕಾಲಾವಕಾಶ ನೀಡಿದ್ದರು. ನಂತರ ಹೆಚ್ಚುವರಿಯಾಗಿ ನಾಲ್ಕು ತಿಂಗಳು ವಿಸ್ತರಿಸಲಾಗಿತ್ತು. ನನಗೆ ನೀಡಿದ್ದ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ. ಇದು ನನಗೆ ತೃಪ್ತಿ ನೀಡಿದೆ ಎಂದು ತಿಳಿಸಿದರು.  ಪ್ರಕರಣದ ಕುರಿತಂತೆ ಸಾರ್ವಜನಿಕರ ಪರವಾಗಿ ಹಿರಿಯ ವಕೀಲ ದೊರೈರಾಜು ಅವರು ವಾದ ಮಂಡಿಸಿದ್ದರು. ದಾಖಲೆಗಳನ್ನು ಮುಂದಿಟ್ಟು ಹಲವು ಅವ್ಯವಹಾರಗಳನ್ನು ಆಯೋಗದ ಗಮನಕ್ಕೆ ತಂದಿದ್ದರು.

Facebook Comments

Sri Raghav

Admin