ಎಸ್‍ಡಿಎ ಸಿಬ್ಬಂದಿ ಎಸಿಬಿ ಬಲೆಗೆ

ಈ ಸುದ್ದಿಯನ್ನು ಶೇರ್ ಮಾಡಿ

ACB

ರಾಮನಗರ, ಆ.23- ಪರಿಹಾರದ ಹಣ ಮಂಜೂರು ಮಾಡಿಸಲು ಲಂಚ ಪಡೆಯುತ್ತಿದ್ದ ಎಸ್‍ಡಿಎ ಸಿಬ್ಬಂದಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಎಸ್‍ಡಿಎ ಸಿಬ್ಬಂದಿ ಆನಂದ್ 20 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲೆಯ ತುಂಬೇನಹಳ್ಳಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಹಾಗೂ ಸಂಬಂಧಿಕರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೌರ್ಜನ್ಯಕ್ಕೊಳಗಾದವರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೂರು ಜನರಿಗೆ ತಲಾ 22,500ರೂ. ಪರಿಹಾರ ಮಂಜೂರು ಮಾಡಲಾಗಿದೆ.
ಪರಿಹಾರದ ಮೊತ್ತವನ್ನು 1 ಲಕ್ಷ ರೂ.ಗೆ ಹೆಚ್ಚಿಸಿ ಮಂಜೂರು ಮಾಡಿಸಿಕೊಡುವುದಾಗಿ ಎಸ್‍ಡಿಎ ಸಿಬ್ಬಂದಿ ಆನಂದ್ ತಲಾ 10 ಸಾವಿರದಂತೆ 30 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಅರ್ಜಿದಾರರು ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಸಿದ್ದರು. ೨೦ ಸಾವಿರ ಲಂಚ ಪಡೆಯುತ್ತಿದ್ದಾಗಲೇ ಆನಂದ್‍ರನ್ನು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

Facebook Comments

Sri Raghav

Admin