ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್..!

Ganapati

ಬೆಂಗಳೂರು. ಆ,23 : ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣ ಈಗ ಮತ್ತೊಂದು ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ರಾಷ್ಟ್ರೀಯ ವಾಹಿನಿಯೊಂದು ತನಿಖೆಯ ಬಗ್ಗೆ ವರದಿ ನೀಡಿದ್ದು, 2500 ಫೋಟೋ, 57 ಮೆಸೇಜ್’ಗಳು, 100 ಇ-ಮೇಲ್’ಗಳನ್ನು ನಾಶಮಾಡಲಾಗಿದೆ ಎನ್ನಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದು ಬಹಿರಂಗ ಗೊಂಡಿದೆ.

ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೊಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ. 100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರ ಮಾಡಿದೆ.

2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು.

Facebook Comments

Sri Raghav

Admin