ಸಿಎಂ ಸಿದ್ದರಾಮಯ್ಯನವರಿಗೆ ಅನಾರೋಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--CM

ಬೆಂಗಳೂರು, ಆ.23- ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊತ್ಸಾಹಕ ಸೊಸೈಟಿ ಆಯೋಜಿಸಿದ್ದ ಶಾಲೆಯ ಅಂಗಳದಲ್ಲೇ ತಾರಾಲಯ, ಸಂಚಾರಿ ಡಿಜಿಟಲ್ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು.

ಮಾತ್ರವಲ್ಲ ಇಂದು ಬೆಳಗಾವಿ ಪ್ರವಾಸ ಮಾಡಬೇಕಿತ್ತು. ಆದರೆ, ಸಿಎಂ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ತಮ್ಮ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ರದ್ದುಗೊಳಿಸಿದ್ದಾರೆ.

Facebook Comments

Sri Raghav

Admin