ರೇಪಿಸ್ಟ್ ರಾಮ್ ರಹೀಮ್ ಸಿಂಗ್ ತೀರ್ಪು, ಪಂಚಕುಲಾದಲ್ಲಿ ಹಿಂಸಾಚಾರಕ್ಕೆ ಮೂವರು ಬಲಿ

Ram-Raheem-Singh--01

ಚಂಡೀಗಢ, ಆ.25-ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚಾ ಸೌದ ಸಂಸ್ಥೆಯ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು ತಪ್ಪಿತಸ್ಥರು ಎಂದು ಪಂಚಕುಲಾದ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಹಿನ್ನೆಲೆಯಲ್ಲೇ ಪಂಚಕುಮಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಪಂಜಾಬ್ ನ 5 ಜಿಲ್ಲೆಗಳಲ್ಲಿ ಕಾರ್ಪ್ಯೂ ಜಾರಿ ಮಾಡಲಾಗಿದ್ದು, ಕರೆಂಟ್ ಮತ್ತು ದೂರವಾಣಿ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ . ಈಗಾಗಲೇ ಭುಗಿಲೆದ್ದ ಹಿಂಸಾಚಾರಕ್ಕೆ 3 ಜನರು ಬಲಿಯಾಗಿದ್ದು, ಮತ್ತಷ್ಟು ಹಿಂಸಾಚಾರ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

2002ರಲ್ಲಿ ಗುರ್ಮಿತ್ ರಾಮ್ ರಹೀಮ್ ಅವರ ಆಶ್ರಮದಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣ ಸಂಬಂಧ ಶುಕ್ರವಾರ  ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ದೇವಮಾನವ ರಾಮ್ ರಹೀಮ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ರಾಮ್‍ರಹೀಮ್ ಸಿಂಗ್ ಅವರ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅನುಯಾಯಿಗಳು ಈಗಾಗಲೇ ಈ ಎರಡೂ ರಾಜ್ಯಗಳಲ್ಲಿ ಜಮಾಯಿಸಿದ್ದಾರೆ.  ಅನಾಮಧೇಯ ಪತ್ರಗಳು ವ್ಯಾಪಕವಾಗಿ ಬಂದ ಹಿನ್ನೆಲೆಯಲ್ಲಿ ದೇರಾ ಮುಖ್ಯಸ್ಥನ ವಿರುದ್ಧ 2002ರಲ್ಲಿ ಲೈಂಗಿಕ ಶೋಷಣೆ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಪಂಜಾಬ್ ಮತ್ತು ಹರ್ಯಾ ಣ ಹೈಕೋರ್ಟ್ ಸೂಚನೆ ನೀಡಿತ್ತು. ಸಿಂಗ್ ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪ ಹೊರೆಸಲಾಗಿತ್ತು. ಈ ಆರೋಪಗಳನ್ನು ಅವರು ನಿರಾಕರಿಸಿದ್ದರು. ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣದಲ್ಲೂ ದೇರಾ ಮುಖ್ಯಸ್ಥರು ವಿಚಾರಣೆ ಎದುರಿಸುತ್ತಿದ್ದಾರೆ.

Facebook Comments

Sri Raghav

Admin