ಆದಷ್ಟು ಶೀಘ್ರದಲ್ಲಿ ಸಂಪುಟ ವಿಸ್ತರಣೆ : ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha--01

ಬೆಂಗಳೂರು, ಆ.26- ಆದಷ್ಟು ಶೀಘ್ರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕಾರ್ಯವನ್ನು ಶೀಘ್ರದಲ್ಲೇ ಕೈಗೊಳ್ಳಲಿದ್ದೇವೆ. ನಿನ್ನೆಯಷ್ಟೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ತಿಂಗಳ ಅಂತ್ಯದಲ್ಲಿ ಮತ್ತೆ ಪಕ್ಷದ ಕಾರ್ಯಕ್ಕಾಗಿ ಆಗಮಿಸಲಿದ್ದಾರೆ ಎಂದರು. ದಲಿತರಿಗೆ ಔತಣಕೂಟ ಏರ್ಪಡಿಸಿ ಯಡಿಯೂರಪ್ಪನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಮಾಡಲಿ ಎಂದ ಅವರು, ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಒಪ್ಪಿಸಬೇಕೆಂದು ಹೇಳುತ್ತಿರುವ ಅವರು ಬರೀ ಸುಳ್ಳನ್ನೇ ಹೇಳುತ್ತಾರೆ. ಈಗಾಗಲೇ ಈ ಪ್ರಕರಣ ಕೋರ್ಟ್‍ನಲ್ಲಿದೆ. ಮತ್ತೊಂದು ತನಿಖೆ ಸಾಧ್ಯವೇ? ಹಾಗಿದ್ದೂ ಈ ರೀತಿ ಹೇಳುವುದು ಸರಿಯೇ ಎಂದು ಪ್ರಶ್ನಿಸಿದರು.

ಎಸ್ಸಿ-ಎಸ್ಟಿ ಅಧಿಕಾರಿ ನೌಕರರ ಬಡ್ತಿ ಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಕುರಿತಂತೆ ರಾಜ್ಯಪಾಲರು ಪತ್ರವನ್ನು ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ರಾಜ್ಯಪಾಲರಿಗೆ ಈ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವಿವರಿಸಿದರು. ಟಿ.ಬಿ.ಜಯಚಂದ್ರ ಮಾತನಾಡಿ, ಎಸ್ಸಿ-ಎಸ್ಟಿ ಅಧಿಕಾರಿಗಳ ಮುಂಬಡ್ತಿ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಇದರ ತುರ್ತು ಅಗತ್ಯವೇನಿದೆ ಎಂದು ರಾಜ್ಯಪಾಲರು ಕೇಳಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ.

ಮತ್ತೊಮ್ಮೆ ಅವರೊಂದಿಗೆ ಮಾತನಾಡಲಿದ್ದೇನೆ ಎಂದು ತಿಳಿಸಿದರು. ಅಧಿವೇಶನ ನಡೆಯುವುದಿಲ್ಲ ಹಾಗಾಗಿ ಸುಗ್ರೀವಾಜ್ಞೆ ತರಲಾಗುತ್ತಿದೆ ಎಂದು ಮೊನ್ನೆ ಮನವರಿಕೆ ಮಾಡಿದ್ದೇನೆ. ಈ ಬಗ್ಗೆ ನಿರ್ದಿಷ್ಟ ಸೂಚನೆ ಕೊಟ್ಟಿಲ್ಲ. ನ್ಯಾಷನಲ್ ಲಾ ಸ್ಕೂಲ್ ಸಂಬಂಧದ ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Facebook Comments

Sri Raghav

Admin