ಎಸಿಬಿ ಹಾಗೂ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಬಿಎಸ್‍ವೈ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01
ಬೆಂಗಳೂರು, ಆ.26- ಶಿವರಾಮ ಕಾರಂತ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಎಸಿಬಿ ಹಾಗೂ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  ಎಸಿಬಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದು, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕೋರ್ಟ್ ಆದೇಶವಿದ್ದರೂ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಎಸಿಬಿ ನಿರ್ಧಾರಕ್ಕೆ ಕಿಡಿಕಾರಿರುವ ಯಡಿಯೂರಪ್ಪ ಇದೇ 28ರಂದು ನಡೆಯುವ ವಿಚಾರಣೆ ವೇಳೆ ಕೋರ್ಟ್ ಆದೇಶ ಉಲ್ಲಂಘಿಸಿದ ಆರೋಪದ ಮೇಲೆ ಎಸಿಬಿ ಹಾಗೂ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಬಿಎಸ್‍ವೈ ಆಪ್ತ ಮೂಲಗಳು ಮಾಹಿತಿ ನೀಡಿವೆ.

Facebook Comments

Sri Raghav

Admin