ಪ್ರಿಯಾಂಕಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Priyanka-Gandhi--01

ನವದೆಹಲಿ, ಆ26-ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಡೆಂಘಿ ಜ್ವರದಿಂದ ಬಳಲುತ್ತಿದ್ದು, ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಪ್ರಿಯಾಂಕ ಜ್ವರದ ಕಾರಣ ಆ.23ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡೆಂಘಿ ಜ್ವರ ಇರುವುದು ದೃಢಪಟ್ಟಿದೆ. ಪ್ರಿಯಾಂಕಾ ಗಾಂಧಿ ಡೆಂಘಿ ಜ್ವರದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಅರೂಪ್ ಬಸು ತಿಳಿಸಿದ್ದಾರೆ.

 

Facebook Comments

Sri Raghav

Admin