ಪಳನಿಸ್ವಾಮಿ ವಿಶ್ವಾಸ ಮತ ಯಾಚನೆಗೆ ಡಿಎಂಕೆ ಆಗ್ರಹ, ರಾಜ್ಯಪಾಲರಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Tamilnadu-Paneer--01

ಚೆನ್ನೈ, ಆ.27- ತಮಿಳುನಾಡಿನಲ್ಲಿ ಅಖಿಲ ಭಾರತ ಅಣ್ಣಾ ಡಿಎಂಕೆ ಪಕ್ಷದ ಎರಡೂ ಬಣಗಳು ವಿಲೀನಗೊಂಡ ನಂತರ ದಿನಕ್ಕೊಂದು ಹೊಸ ಬೆಳವಣಿಗೆಗಳೊಂದಿಗೆ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ವಿರೋಧಪಕ್ಷದವಾದ ಡಿಎಂಕೆ ಮುಖಂಡರು ಇಂದು ರಾಜ್ಯಪಾಲ ವಿದ್ಯಾಸಾಗರ್‍ರಾವ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಬಹುಮತ ಸಾಬೀತು ಮಾಡುವಂತೆ ಆಗ್ರಹಿಸಿದ್ದಾರೆ.  ಎಐಎಡಿಎಂಕೆಯ 19 ಶಾಸಕರು ಮುಖ್ಯಮಂತ್ರಿಗೆ ಬೆಂಬಲ ವಾಪಸ್ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ಸೂಚಿಸುವಂತೆ ಡಿಎಂಕೆ ನಾಯಕರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿ.ವಿ.ದಿನಕರನ್ ಅವರ 19 ಬೆಂಬಲಿಗ ಶಾಸಕರು ಮುಖ್ಯಮಂತ್ರಿ ವಿರುದ್ಧ ತಿರುಗಿಬಿದ್ದು ಬೆಂಬಲ ವಾಪಸ್ ಪಡೆದಿದ್ದಾರೆ. ಈ ಮಧ್ಯೆ ದಿನಕರನ್ ಅವರು ಮುಖ್ಯಮಂತ್ರಿ ಪಳನಿಸ್ವಾಮಿ ಪಕ್ಷದ ಸೇಲಂ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಿದ್ದಾರೆ.

Facebook Comments

Sri Raghav

Admin