ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

Asaram-Bapu--01

ನವದೆಹಲಿ, ಆ.28-ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜಾಮೀನು ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಈ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಗುಜರಾತ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಅಸರಾಂ ವಿಚಾರಣೆ ವಿಳಂಬವಾಗುತ್ತಿದ್ದು, ತ್ವರಿತ ವಿಚಾರಣೆಗೆ ಸೂಚನೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎನ್.ವಿ.ರಾಮಣ್ಣ ಮತ್ತು ಅಮಿತವ್ ರಾಯ್ ಅವರನ್ನು ಒಳಗೊಂಡ ಪೀಠವು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಇಲ್ಲಿಯವರೆಗೆ ಅತ್ಯಾಚಾರ ಸಂತ್ರಸ್ತೆಯನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದು ಪ್ರಶ್ನಿಸಿದೆ. ಈ ಸಂಬಂಧ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.

Facebook Comments

Sri Raghav

Admin