‘ಪ್ಯಾಲೆಸ್ ಆನ್ ವೀಲ್ಸ್’ ಮೂಲಕ ದೇಶ-ವಿದೇಶದ ಪ್ರವಾಸಿಗರಿಗೆ ಮೈಸೂರು ಅರಮನೆ ಪರಿಚಯ

ಈ ಸುದ್ದಿಯನ್ನು ಶೇರ್ ಮಾಡಿ

Mysuru-Palace

ಮೈಸೂರು, ಆ.29- ದೇಶ-ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಅರಮನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ಯಾಲೆಸ್ ಆನ್ ವೀಲ್ಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17ರಿಂದ ಆಗಸ್ಟ್ 2ರ ವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 9.30 ರಿಂದ ಸಂಜೆ 6.30ರ ವರೆಗೆ ಎಸಿ ಬಸ್‍ನಲ್ಲಿ ಪ್ರವಾಸಿಗರನ್ನು ಕರೆದೊಯ್ದು ಮೈಸೂರು ಅರಮನೆ, ಜಗನ್ಮೋಹನ ಅರಮನೆ, ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯ, ಪ್ಲೆಟಲ್ ಟ್ರೈನಿಂಗ್ ಸೆಂಟರ್, ಲಲಿತ ಮಹಲ್ ಪ್ಯಾಲೆಸ್, ಟೌನ್‍ಹಾಲ್, ಓರಿಯಂಟಲ್ ರಿಸರ್ಚ್ ಇನ್ಸ್‍ಟಿಟ್ಯೂಟ್, ಜಯಲಕ್ಷ್ಮಿ ವಿಲಾಸ್ ಅರಮನೆ, ಸರ್ಕಾರಿ ಆಯುರ್ವೇದ ಕಾಲೇಜು, ಕೆಆರ್ ಆಸ್ಪತ್ರೆ, ರೈಲ್ವೆ ಮ್ಯೂಜಿಯಂಗಳನ್ನು ತೋರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ದರವನ್ನು ಅತಿ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಕಲಾವಿದರಿಂದ ಅರ್ಜಿ ಆಹ್ವಾನ :
ಮೈಸೂರು, ಆ.29- ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸುವ ಆಹಾರ ಮೇಳದ ಸ್ಥಳದಲ್ಲಿ ಪ್ರತಿದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.ಸಂಜೆ 5ರಿಂದ ರಾತ್ರಿ 10ರ ವರೆಗೆ ಜಾನಪದ ಕಲೆ, ಸಂಗೀತ, ಶಾಸ್ತ್ರೀಯ ನೃತ್ಯ, ಸಮಕಾಲೀನ ನೃತ್ಯ, ನೃತ್ಯರೂಪಕ, ಯಕ್ಷಗಾನ, ಮ್ಯಾಜಿಕ್, ಖವಾಲಿ ಮುಂತಾದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದಕ್ಕಾಗಿ ಕಲಾವಿದರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಾವಿದರು ಸೆ.5ರೊಳಗೆ ಕೆ.ರಾಮೇಶ್ವರಪ್ಪ, ಹಿರಿಯ ಉಪನಿರ್ದೇಶಕರು, ಆಹಾರ-ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮೈಸೂರು ಇಲ್ಲಿಗೆ ಅಂಚೆ ಮೂಲಕ ತಮ್ಮ ವಿವರ ಕಳುಹಿಸಬಹುದಾಗಿದೆ. ಅಥವಾ ಇ-ಮೇಲ್ ddfoodmysore@gmail.com ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.0821-2422107 ಸಂಪರ್ಕಿಸಬಹುದಾಗಿದೆ.

Facebook Comments

Sri Raghav

Admin