ವೀರಶೈವ-ಲಿಂಗಾಯಿತ ಧರ್ಮ ವಿವಾದ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

Eshwar-Khandre--01

ಬೆಂಗಳೂರು, ಆ.29- ಲಿಂಗಾಯತ -ವೀರಶೈವ ಧರ್ಮಗಳು ಒಂದೇ ಆಗಿದ್ದು, ಇಬ್ಬರೂ ಲಿಂಗ ಪೂಜೆ ಮಾಡುತ್ತಾರೆ. ಹೀಗಾಗಿ ಭೇದಭಾವ, ಭಿನ್ನಾ ಭಿಪ್ರಾಯ ಮರೆತು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪೌರಾಡಳಿತ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಮಹಾಸಭಾ ಅಭಿಪ್ರಾಯವು ಲಿಂಗಾಯತ ಮತ್ತು ವೀರಶೈವ ಒಂದೇ ಆಗಿದೆ. ವೀರಶೈವ ಮಹಾಸಭಾವನ್ನು ಸ್ಥಾಪಿಸಿದ ಕುಮರೇಶ್ವರ್ ಅವರ ಅಭಿಪ್ರಾಯವೂ ಇದೇ ಆಗಿದೆ. ಇತ್ತೀಚೆಗೆ ಇವೆರಡರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ವೀರಶೈವ ಮತ್ತು ಲಿಂಗಾಯತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಸಮಸ್ಯೆಯನ್ನು ಶಮನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಇವರಿಬ್ಬರ ಭಿನ್ನಾಭಿಪ್ರಾಯ ಶಮನಗೊಳ್ಳುತ್ತದೆ ಎಂಬ ಆಶಾಭಾವ ನನ್ನದು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಇಬ್ಬರು ಒಟ್ಟಾಗಿ ಬನ್ನಿ ಎಂದು ಸಲಹೆ ನೀಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತÉಗೆದುಕೊಂಡು ಭಿನ್ನಾಭಿಪ್ರಾಯ ಬಗೆಹರಿಸುವುದಾಗಿ ಸಚಿವರು ತಿಳಿಸಿದರು.

Facebook Comments

Sri Raghav

Admin