ದೆಹಲಿ ಹೈಕೋರ್ಟ್‍ಗೆ ರೇರಾ ಅರ್ಜಿಗಳ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಮನವಿ

supreme-ocurt

ನವದೆಹಲಿ, ಆ.30-ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ (ರೇರಾ) ಸಿಂಧುತ್ವ ಪ್ರಶ್ನಿಸಿ ವಿವಿಧ ಹೈಕೋರ್ಟ್‍ಗಳಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನು ದೆಹಲಿ ಹೈಕೋರ್ಟ್‍ಗೆ ವರ್ಗಾವಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿದೆ.  ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ಮನವಿ ಸಲ್ಲಿಸಿದ್ದು, ದೇಶದ ವಿವಿಧ ಉಚ್ಛ ನ್ಯಾಯಾಲಯಗಳಲ್ಲಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ 21 ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವೆಲ್ಲವನ್ನೂ ದೆಹಲಿ ಹೈಕೋರ್ಟ್‍ಗೆ ವರ್ಗಾಯಿಸಿ ವಿಚಾರಣೆ ನಡೆಸಲಬೇಕು ಎಂದು ಕೋರಿದೆ. ಕೇಂದ್ರದ ಮನವಿ ಕುರಿತು ವಿಚಾರಣೆ ನಡೆಸಲು ಸಮ್ಮತಿಸಿದ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆ ದಿನಾಂಕವನ್ನು ಸೆಪ್ಟೆಂಬರ್ 4ಕ್ಕೆ ನಿಗದಿಗೊಳಿಸಿದೆ.

Facebook Comments

Sri Raghav

Admin