ಪವರ್ ಮಿನಿಸ್ಟರ್ ಡಿಕೆಶಿ ಆಪ್ತನ ಮನೆಮೇಲೆ ಐಟಿ ರೇಡ್

ಈ ಸುದ್ದಿಯನ್ನು ಶೇರ್ ಮಾಡಿ

DKS-Shivakumar--01

ಬೆಂಗಳೂರು, ಆ.30-ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಜಯ್ ಮುಳಗುಂದ ಅವರ ರಾಜಾಜಿನಗರದ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ವಿಜಯ್ ಮುಳಗುಂದ ಅವರು ಕಾವೇರಿ ಹ್ಯಾಂಡ್‍ಲ್ಯೂಮ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಇವರು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ 6 ಗಂಟೆ ಸುಮಾರಿನಲ್ಲಿ 6 ರಿಂದ 8 ಮಂದಿಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ರಾಜಾಜಿನಗರದ ವಿಜಯ್ ಮುಳಗುಂದ ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

DK-Shivakumar--IT-Raid

ಬೆಳಗ್ಗೆ ದಾಳಿ ವೇಳೆ ವಿಜಯ್ ಮುಳಗುಂದ ಅವರು ಮನೆಯಲ್ಲೇ ಇದ್ದರು ಎನ್ನಲಾಗಿದ್ದು, ಇದುವರೆಗೂ ಒಬ್ಬ ಐಟಿ ಅಧಿಕಾರಿಯೂ ಸಹ ಮನೆಯಿಂದ ಹೊರ ಬಂದಿಲ್ಲ. ಸತತ 6 ಗಂಟೆಗೂ ಹೆಚ್ಚು ಕಾಲ ದಾಖಲೆ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದರು.  ಇತ್ತೀಚೆಗಷ್ಟೇ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಅವರ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಬೆನ್ನಲ್ಲೇ ಇದೀಗ ಅವರ ಆಪ್ತರಾದ ವಿಜಯ್ ಮುಳಗುಂದ ಅವರ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

Facebook Comments

Sri Raghav

Admin