ಬೈಕ್‍ಗೆ ಬಿಎಂಟಿಸಿ ಬಸ್ ಡಿಕ್ಕಿ, ಮೂವರು ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

BMTC-Accident--01

ಬೆಂಗಳೂರು, ಆ. 30- ಮೂವರು ಸ್ನೇಹಿತರು ಒಂದೇ ಬೈಕ್‍ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ಗಂಭೀರ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೂಲತಃ ನೇಪಾಳದ ಮುಖೇಶ್‍ಕುಮಾರ್, ಅಬ್ದುಲ್ ಮತ್ತು ತಮಿಳುನಾಡಿನ ನವೀನ್ ಗಂಭೀರ ಗಾಯಗೊಂಡಿದ್ದು ಇವರನ್ನು ಸ್ಥಳೀಯ
ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ 8.50ರಲ್ಲಿ ಈ ಮೂವರೂ ಯಮಹಾ ರೇ ಬೈಕ್‍ನಲ್ಲಿ ತೆರಳುತ್ತಿದ್ದಾಗ ಕೆಂಪೇಗೌಡ ಬಸ್‍ನಿಲ್ದಾಣದಿಂದ ತಾವರೆಕೆರೆಗೆ ಹೋಗುತ್ತಿದ್ದ 242 ಬಿ ನಂಬರಿನ ಬಸ್ಸು ಸುಮನಹಳ್ಳಿ ಜಂಕ್ಷನ್ ಬಳಿ ಅತಿವೇಗವಾಗಿ ಹಿಂದಿನಿಂದ ಬಂದು ಇವರ ಬೈಕ್‍ಗೆ ಅಪ್ಪಳಿಸಿದೆ. ಪರಿಣಾಮವಾಗಿ ಈ ಮೂವರಿಗೂ ಸೊಂಟದ ಭಾಗದಲ್ಲಿ ಗಂಭೀರ ಪೆಟ್ಟಾಗಿದ್ದು , ಇವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಮುಖೇಶ್‍ಕುಮಾರ್ ಈಸ್ಟ್ ವೆಸ್ಟ್ ಕಾಲೇಜಿನಲ್ಲಿ ಡಿಪೊ್ಲಮಾ ವ್ಯಾಸಂಗ ಮಾಡುತ್ತಿದ್ದರು, ಇನ್ನಿಬ್ಬರು ಯಾವ ಕಾಲೇಜಿನವರು ಎಂಬುದು ಸದ್ಯ ತಿಳಿದುಬಂದಿಲ್ಲ.

ಸುದ್ದಿ ತಿಳಿದ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin