ಆರ್.ಬಿ.ತಿಮ್ಮಾಪುರ್ ನಕಲಿ ವಿಳಾಸ ಪ್ರಕರಣ ಕುರಿತು ಕಾನೂನು ಚೌಕಟ್ಟಿನಲ್ಲಿ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

R.B.Timmapura

ಬೆಂಗಳೂರು, ಆ.31- ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ್ ಅವರ ನಕಲಿ ವಿಳಾಸ ಸಂಬಂಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಳಾಸ ಬದಲಾವಣೆ ಮಾಡಿರುವ ಪ್ರಕರಣ ಸಂಬಂಧ ಈ ಹಿಂದೆಯೂ ಚರ್ಚೆಯಾಗಿತ್ತು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ. ಏನು, ಎಲ್ಲಿ, ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ ಎಂದು ಅವರು ತಿಳಿಸಿದರು.

ಚಿತ್ರನಟ ದರ್ಶನ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಅವರ ತಾಯಿ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದಾರೆ. ದರ್ಶನ್ ಯಾರ ಬಳಿ ಮಾತನಾಡಿದ್ದಾರೆ ಎಂಬುದನ್ನು ವಿಚಾರಿಸುತ್ತೇನೆ ಎಂದು ಹೇಳಿದರು. ಈಗಾಗಲೇ ಬೂತ್ ಮಟ್ಟದ ಸಭೆ ನಡೆಸಿ ಪಕ್ಷ ಸಂಘಟನೆ ಮಾಡಲಾಗಿದೆ. ಇದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 9 ಅಥವಾ 10ರಂದು ಬೂತ್ ಮಟ್ಟದ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿಯಲ್ಲಿ ವಿಭಾಗವಾರು ಸಭೆ ಆರಂಭವಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಮುಖಂಡರೊಂದಿಗೆ ಸಭೆ ಸೇರಿ ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ಅಭ್ಯರ್ಥಿಗಳ ಆಯ್ಕೆ, ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ, ಚುನಾವಣೆಗೆ ತಯಾರಿ, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin