ಕಾವೇರಿ ಕೊಳ್ಳದ 3 ಜಿಲ್ಲೆಗಳ 107 ಹಳ್ಳಿಗಳಲ್ಲಿ ವಾಣಿಜ್ಯ ಚಟುವಟಿಕೆ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Cauvery--01

ನವದೆಹಲಿ, ಆ.31-ಕಾವೇರಿ ಕೊಳ್ಳದ ಮೂರು ಜಿಲ್ಲೆಗಳ 600 ಕಿ.ಮೀ.ಗಳ ಪ್ರದೇಶವನ್ನು ಕೇಂದ್ರ ಸರ್ಕಾರ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ 107 ಹಳ್ಳಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ 600 ಕಿ.ಮೀ.ಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆ.22ರಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಈ ಮೂರು ಜಿಲ್ಲೆಗಳ 107 ಹಳ್ಳಿಗಳಲ್ಲಿ ಇನ್ನು ಮುಂದೆ ವಾಣಿಜ್ಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತಿಲ್ಲ.

ಬೃಹತ್ ಕಟ್ಟಡ ನಿರ್ಮಾಣ ಸೇರಿದಂತೆ 10 ವಾಣಿಜ್ಯ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿದೆ. ಕೇಂದ್ರ ಸರ್ಕಾರದ ಈ ಅಧಿಸೂಚನೆಯಿಂದ ಹೋಟೆಲ್, ರೆಸಾರ್ಟ್, ವಿಹಾರಧಾಮ ಮತ್ತು ಪ್ರವಾಸೋದ್ಯಮಕ್ಕೂ ದೊಡ್ಡ ಮಟ್ಟ ಹಿನ್ನಡೆಯಾಗಿದೆ.

Facebook Comments

Sri Raghav

Admin