ಕೇಂದ್ರ ಸಚಿವ ಸ್ಥಾನಕ್ಕೆ ರಾಜೀವ್ ಪ್ರತಾಪ್ ರೂಡಿ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Rajeev

ನವದೆಹಲಿ, ಆ.31: ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಖಾತೆ ಹೊಂದಿದ್ದ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೂ ಇಬ್ಬರು ಅಥವಾ ಮೂವರು ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ನಡೆಯುವ ಪ್ರಮುಖ ಸಂಪುಟ ಪುನಾರಚನೆ ಇದಾಗಲಿದ್ದು ಅರುಣ್ ಜೇಟ್ಲಿ ತಮ್ಮ ಬಳಿ ಇರುವ ಎರಡು ಖಾತೆ ಪೈಕಿ ಒಂದನ್ನು ಬಿಟ್ಟುಕೊಡುವ ಸಾಧ್ಯತೆಗಳಿವೆ. ಹಲವರ ನಿರೀಕ್ಷೆ ಪ್ರಕಾರ ರೈಲ್ವೆ ಖಾತೆಯಲ್ಲಿ ಬದಲಾವಣೆ ಆಗಲಿದೆ ಎನ್ನಲಾಗಿದೆ. ಸಂಭವಿಸಿದ ಸರಣಿ ರೈಲು ಅಪಘಾತಗಳ ಹಿನ್ನೆಲೆಯಲ್ಲಿ ಸುರೇಶ್ ಪ್ರಭು ತಮ್ಮ ರಾಜಿನಾಮೆಯನ್ನು ಪ್ರಧಾನಿಗೆ ಸಲ್ಲಿಸಿದ್ದರು.

Facebook Comments

Sri Raghav

Admin