ತಿರು ಓಣಂ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ksrtc

ಬೆಂಗಳೂರು, ಆ.31- ತಿರು ಓಣಂ ಹಬ್ಬದ ಪ್ರಯುಕ್ತ ಕರಾರಸಾ ನಿಗಮದ ವತಿಯಿಂದ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯ ವಿವಿಧ ಸ್ಥಳಗಳಿಗೆ ಹೆಚ್ಚವರಿ ಬಸ್‍ಗಳ ಸೌಲಭ್ಯ ಕಲ್ಪಿಸಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯದ ಪ್ರಮುಖ ಸ್ಥಳಗಳಾದ ಕಣ್ಣಾನೂರು, ಕೋಜಿಕೋಡ್, ಎರ್ನಾಕುಲಂ, ಪಾಲ್ಗಾಟ್, ತ್ರಿಶೂರ್, ಕೊಟ್ಟಾಯಂ ಮುಂತಾದ ಸ್ಥಳಗಳಿಗೆ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‍ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ಸಾರ್ವಜನಿಕ ಪ್ರಯಾಣಿಕರು ಬೆಂಗಳೂರು ನಗರದಲ್ಲಿರುವ 115, ರಾಜ್ಯದ ಇತರೆ ಸ್ಥಳಗಳಲ್ಲಿರುವ 301 ಹಾಗೂ ಕೇರಳ ರಾಜ್ಯದಲ್ಲಿ 43 ಕೌಂಟರ್ ಒಳಗೊಂಡಂತೆ ಅಂತರರಾಜ್ಯದಲ್ಲಿ 169 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಮುಂಗಡ ಟಿಕೆಟ್ ಕಾಯ್ದಿರಿಸಲು 30 ದಿನಗಳವರೆಗಿನ ಸೌಲಭ್ಯ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-49596666ಅನ್ನು ಸಂಪರ್ಕಿಸುವಂತೆ ಸಂಸ್ಥೆ ಮನವಿ ಮಾಡಿದೆ.

Facebook Comments

Sri Raghav

Admin