ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

Crime-Bengaluru---b021

ಬೆಂಗಳೂರು, ಆ.31- ಪತ್ನಿಯೊಂದಿಗೆ ಜಗಳವಾಡಿ ಮಚ್ಚಿನಿಂದ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪತಿ ನಂತರ ಪೊಲೀಸರು ನನ್ನನ್ನು ಬಂಧಿಸಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಲ್ಲಿ ನಡೆದಿದೆ. ಕೋಗಿಲು ಗ್ರಾಮದ ಶ್ರೀನಿವಾಸ ನಗರದ ನಿವಾಸಿ ನಾಗರಾಜ ಆತ್ಮಹತ್ಯೆ ಮಾಡಿಕೊಂಡ ಪತಿ. ಕೌಟುಂಬಿಕ ವಿಚಾರವಾಗಿ ನಾಗರಾಜ್ ಮತ್ತು ದೇವಿ ದಂಪತಿ ನಡುವೆ ಸಂಜೆ ಜಗಳವಾಗಿದೆ. ಈ ವೇಳೆ ಆಕ್ರೋಶಗೊಂಡ ನಾಗರಾಜ್ ಕೈಗೆ ಸಿಕ್ಕ ಮಚ್ಚಿನಿಂದ ಪತ್ನಿಯ ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದನು. ಹಲ್ಲೆಯಿಂದ ಗಂಭೀರ ಗಾಯಗೊಂಡ ದೇವಿಯವರನ್ನು ನೆರೆಹೊರೆಯವರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಸಂಬಂಧ ನಾಗರಾಜ್ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಪೊಲೀಸರು ನನ್ನನ್ನು ಬಂಧಿಸಬಹುದೆಂದು ಹೆದರಿದ ಶ್ರೀನಿವಾಸ್ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದ ಯಲಹಂಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin