ನಿತ್ಯಾನಂದನನ್ನೂ ಕೈಬೀಸಿ ಕರೆಯುತ್ತಿದೆ ಶ್ರೀಕೃಷ್ಣ ಜನ್ಮಸ್ಥಳ..!?

ಈ ಸುದ್ದಿಯನ್ನು ಶೇರ್ ಮಾಡಿ

Nityananda--04

ಬೆಂಗಳೂರು, ಸೆ.1- ಅತ್ತ ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ್ದ ಡೇರಾಸಚ್‍ಸೌಧ ಮುಖ್ಯಸ್ಥ ರಾಮ್‍ರಹೀಮ್ ಸಿಂಗ್ ಜೈಲು ಪಾಲಾಗಿದ್ದರೆ, ಇತ್ತ ಬಿಡದಿಯ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನಿಗೂ ಕಾನೂನಿನ ಕುಣಿಕೆ ಬಿಗಿಯಾಗುವ ಲಕ್ಷಣಗಳು ಗೋಚರಿಸಿವೆ.ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ವಿರುದ್ಧ ದಾಖಲಾಗಿರುವ ಪ್ರಕರಣವನ್ನು 10 ದಿನಗಳ ನಂತರ ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲು ಮುಂದಾಗಿದೆ.ಸ್ವಯಂ ಘೋಷಿತ ದೇವಮಾನವರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಬೇಕೆಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

Nityananda--03

ಈ ಹಿನ್ನೆಲೆಯಲ್ಲಿ ಬಿಡದಿಯ ನಿತ್ಯಾನಂದ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಮುಂದಿನ ವಾರ ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಮೂರ್ತಿಗಳಾದ ದೀಪಕ್‍ಮಿಶ್ರ ಮತ್ತು ಎ.ಎಂ.ಖನ್ವೀಲ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಸದ್ಯಕ್ಕೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಉಂಟಾಗಿರುವ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಡೆಯುತ್ತಿರುವ ವಿಚಾರಣೆಯನ್ನು ದೀಪಕ್‍ಮಿಶ್ರ, ಎ.ಎಂ.ಖನ್ವೀಲ್ಕರ್ ಹಾಗೂ ಅಮಿತವರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

Nityananda--02

ಮುಂದಿನ ವಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಣೆ ಅಂತ್ಯಗೊಳ್ಳಲಿದ್ದು, ತದನಂತರ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ನಿತ್ಯಾನಂದನ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ವಿಚಾರಣೆ ನಡೆಸಲಿದ್ದಾರೆ.  ಈಗಾಗಲೇ 2010 ನವೆಂಬರ್ ತಿಂಗಳಿನಲ್ಲಿ ನಿತ್ಯಾನಂದನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿ ಹೈಕೋರ್ಟ್‍ಗೆ ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್)ಯನ್ನು ಸಲ್ಲಿಸಿದೆ.
ಚಾರ್ಜ್‍ಶೀಟ್‍ನಲ್ಲಿ ನಿತ್ಯಾನಂದ ಅತ್ಯಾಚಾರ ನಡಸಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಇದನ್ನು ಪ್ರಶ್ನಿಸಿ ಅವರ ಪರ ವಕೀಲರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ವಿ.ಎನ್.ರಘುಪತಿ ಅವರು ಪ್ರತಿನಿಧಿಸುತ್ತಿದ್ದಾರೆ. ನಾವು ಈಗಾಗಲೇ ನ್ಯಾಯಮೂರ್ತಿಗಳಿಗೆ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದೇವೆ. 10 ದಿನಗಳ ನಂತರ ಅರ್ಜಿ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

Nityananda--01

ಏನಿದು ಪ್ರಕರಣ?

ಬಿಡದಿಯ ಧ್ಯಾನಪೀಠದಲ್ಲಿರುವ ಸ್ವಯಂ ಘೋಷಿತ ದೇವಮಾನವ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ರಾಷ್ಟ್ರಾದ್ಯಂತ ಭಾರೀ ಸುದ್ದಿಯಾಗಿತ್ತು. ಆಶ್ರಮಕ್ಕೆ ಬರುತ್ತಿದ್ದ ಭಕ್ತರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ನಿತ್ಯಾನಂದ ಕಾರು ಚಾಲಕ ಲೆನಿನ್‍ಕುರಪ್ಪನ್ ದೂರು ನೀಡಿದ್ದರು.

ನಿತ್ಯಾನಂದ ಮಹಿಳೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿತ್ತು. ಇದು ಬಹಿರಂಗಗೊಂಡ ನಂತರ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಬಳಿಕ ಸುಧೀರ್ಘ ಕಾನೂನು ಸಂಘರ್ಷ ನಡೆದ ನಂತರ ಸುಪ್ರೀಂಕೋರ್ಟ್ ನಿತ್ಯಾನಂದನಿಗೆ ಪುರುಷತ್ವ ಪರೀಕ್ಷೆ ನಡೆಸಲು ಹಾಜರಾಗುವಂತೆ ಸೂಚನೆ ಕೊಟ್ಟಿತ್ತು. ಇದರಂತೆ ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹಾಜರಾಗಿದ್ದರು. ವೈದ್ಯರು ಅವರ ಧ್ವನಿ, ರಕ್ತ ಸೇರಿದಂತೆ ವಿವಿಧ ರೀತಿಯ ತಪಾಸಣೆ ನಡೆಸಿದ್ದರು. ಮೂಲಗಳ ಪ್ರಕಾರ ನಿತ್ಯಾನಂದ ಮಹಿಳೆಯ ಮೇಲೆ ಅತ್ಯಾಚಾರ ನಡೆಸುವ ಸಾಮಥ್ರ್ಯ ಹೊಂದಿಲ್ಲ ಎಂದು ಹೇಳಲಾಗುತ್ತಿತ್ತು. ಆತ ನಪುಂಷಕ ಎಂಬ ಮಾತುಗಳು ಹರಿದಾಡುತ್ತಿದ್ದವು.

ಆದರೆ, ಸಿಐಡಿ ವರದಿಯಲ್ಲಿ ನಿತ್ಯಾನಂದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿವುದು ಸಾಬೀತಾಗಿದ್ದರಿಂದ ಸ್ವಯಂ ಘೋಷಿತ ದೇವಮಾನವ ನಪುಂಷಕವೋ ಇಲ್ಲವೇ ಪುರುಷತ್ವ ಹೊಂದಿದ್ದಾನೆಯೇ ಎಂಬುದು ಸಾರ್ವಜನಿಕರಲ್ಲು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  ಒಂದು ವೇಳೆ ಅತ್ಯಾಚಾರ ನಡೆಸಿರುವುದು ಸಾಬೀತಾದರೆ ಹರಿಯಾಣದ ರಾಮ್‍ರಹಿಮ್‍ಸಿಂಗ್‍ಗೆ ಆದ ಶಿಕ್ಷೆ ಬಿಡದಿಯ ನಿತ್ಯಾನಂದನಿಗೂ ಆಗುವುದರಲ್ಲಿ ಸಂಶಯವೇ ಇಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Facebook Comments

Sri Raghav

Admin