ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇನ್ನೂ 3 ದಿನ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

Rain--01

ಬೆಂಗಳೂರು, ಸೆ.1-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ತಮಿಳುನಾಡಿನ ಚೆನ್ನೈ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್‍ರೆಡ್ಡಿ ಈ ಸಂಜೆಗೆ ತಿಳಿಸಿದರು.

ಹವಾಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಅವರು ಹೇಳಿದರು. ನಿನ್ನೆ ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. 1 ಸೆಂಟಿಮೀಟರ್‍ನಿಂದ 11 ಸೆಂಟಿಮೀಟರ್‍ವರೆಗೂ ವ್ಯಾಪಕ ಪ್ರಮಾಣದ ಮಳೆಯಾದ ವರದಿಯಾಗಿದೆ. ಗೊಟ್ಟಿಗೆರೆಯಲ್ಲಿ 116 ಮಿ.ಮೀಟರ್‍ನಷ್ಟು ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಮಿಲಿಮೀಟರ್‍ನಲ್ಲಿ ಮಳೆ ಪ್ರಮಾಣ:

ಬೇಗೂರು 111, ಕೋಣನಕುಂಟೆ 45, ಬಿಳೇಕಳ್ಳಿ 24.5, ಅಂಜನಾಪುರ 66, ಸಿಂಗಸಂದ್ರ 49.5, ಬೊಮ್ಮನಹಳ್ಳಿ 45, ಎಚ್‍ಎಸ್‍ಆರ್ ಲೇಔಟ್ 55, ವಿ.ವಿ.ಪುರಂ 48, ಘಾಳಿ ಆಂಜನೇಯ ವಾರ್ಡ್ 41.5, ವಿದ್ಯಾಪೀಠ 53, ಕೋರಮಂಗಲ 48.5,

Facebook Comments

Sri Raghav

Admin