ಸಚಿವ ಸ್ಥಾನ ಸಿಗದಿದ್ದಕ್ಕೆ ಸ್ದಿದು ನ್ಯಾಮೇಗೌಡ ಬೇಸರ

ಈ ಸುದ್ದಿಯನ್ನು ಶೇರ್ ಮಾಡಿ

Siddu-Nyamegopwda

ಬೆಂಗಳೂರು, ಸೆ.1- ಸಚಿವ ಸ್ಥಾನ ದೊರೆಯದೆ ಇರುವುದು ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಬೇಸರ ತಂದಿದೆ. ಸಮಾಜ ಸೇವೆ ಮಾಡಲು ಸಚಿವ ಸ್ಥಾನ ಆಗಬೇಕೆಂದೇನು ಇಲ್ಲ. ಇರುವ ಅವಕಾಶಗಳನ್ನು ಬಳಸಿಕೊಂಡು ಕೆಲಸ ಮಾಡುತ್ತೇನೆಂದು ಶಾಸಕ ಸಿದ್ದು ನ್ಯಾಮೇಗೌಡ ಹೇಳಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿರಿಯ ಶಾಸಕರಾದ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆ ಸಂದರ್ಭದಲ್ಲಿ ನಾನು ಕೂಡ ಮನವಿ ಮಾಡಿದ್ದೆ. ಆದರೆ, ಕಾರಣಾಂತರಗಳಿಂದ ಸಚಿವ ಸ್ಥಾನ ಸಿಗಲಿಲ್ಲ ಎಂದರು.

ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ನಾನು ಯಾವುದೇ ಲಾಬಿ ಮಾಡಿಲ್ಲ. ಅಧಿಕಾರದ ಅವಧಿ ಇನ್ನು ಕೇವಲ 5-6 ತಿಂಗಳು ಮಾತ್ರ ಇರುವುದರಿಂದ ನಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಬಿಟ್ಟಿದ್ದೇನೆ. ಆದರೆ, ಅವಕಾಶಸಿಗದೆ ಇರುವುದಕ್ಕಾಗಿ ಬೇಸರವಾಗಿದೆ ಎಂದು ಹೇಳಿದರು.

Facebook Comments

Sri Raghav

Admin