ಸಿದ್ದರಾಮಯ್ಯನವರ ಸಂಪುಟ ಸೇರುವ ಆಸೆ ಈಡೇರಿದೆ : ಎಚ್.ಎಂ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Revanna-HM

ಬೆಂಗಳೂರು, ಸೆ.1- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಕೆಲಸ ಮಾಡಬೇಕು ಎಂದು ಬಹುದಿನಗಳ ಆಸೆ ಇತ್ತು. ಅದು ನೆರವೇರಿದೆ. ಸಮಯ ಕಡಿಮೆ ಇದ್ದರೂ ಸಾಧನೆ ಮಾಡಬೇಕೆಂಬ ಮನಸ್ಸಿದ್ದರೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ನೂತನ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು. ಪ್ರಮಾಣವಚನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಅದು ಈಗ ಕೂಡಿ ಬಂದಿದೆ. ಇನ್ನು ಕೆಲವೇ ತಿಂಗಳು ಅವಕಾಶವಿದೆ. ನಮ್ಮ ಮುಂದೆ ಚುನಾವಣೆ ಇದೆ. ಅದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತೇವೆ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ ಸರ್ಕಾರ ಮತ್ತು ಪಕ್ಷಕ್ಕೆ ಒಳ್ಳೆ ಹೆಸರು ತರುತ್ತೇನೆ ಎಂದು ಹೇಳಿದರು.

ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಅದಕ್ಕೆ ಪೂರಕವಾಗಿ ನಾವೂ ಕೂಡ ಕೆಲಸ ಮಾಡಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತೇವೆ. ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಹಾಗೂ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.
ಕಳೆದ ನಾಲ್ಕು ವರ್ಷಗಳಿಂದ ಸರ್ಕಾರ ಸಮರ್ಥವಾಗಿ ಕೆಲಸ ನಿರ್ವಹಿಸಿದೆ. ಆ ಸರ್ಕಾರದಲ್ಲಿ ಸಚಿವರಾಗಲು ನಮಗೂ ಅವಕಾಶ ಸಿಕ್ಕಿರುವುದು ನಮ್ಮ ಭಾಗ್ಯ ಎಂದು ರೇವಣ್ಣ ಹೇಳಿದರು.

Facebook Comments

Sri Raghav

Admin