ದಸರಾಗೆ ಪ್ರವಾಸಿಗರ ಅನುಕೂಲಕ್ಕಾಗಿ 125ಕ್ಕೂ ಹೆಚ್ಚು ಬಸ್‍ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

Dasara-Bus---01

ಮೈಸೂರು, ಸೆ.2- ಪ್ರವಾಸಿಗರ ಅನುಕೂಲಕ್ಕಾಗಿ ಈ ಬಾರಿ 125ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಸೆ.21ರಿಂದ 30ರ ವರೆಗೆ ಗ್ರಾಮಾಂತರ ಘಟಕದಿಂದ 125 ಬಸ್‍ಗಳನ್ನು ಹೆಚ್ಚುವರಿಯಾಗಿ ಬಿಡಲಾಗುವುದು. ಅ.5ರ ವರೆಗೂ ರಜೆ ಇರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದರು. ಮೈಸೂರು, ಹಾಸನ, ಬೆಂಗಳೂರು, ಮಂಗಳೂರು, ಧರ್ಮಸ್ಥಳ, ತುಮಕೂರು, ಚಿತ್ರದುರ್ಗ, ಚಾಮರಾಜನಗರ ಸೇರಿದಂತೆ ಮತ್ತಿತರ ಜಿಲ್ಲೆಗಳಿಂದ ಹೆಚ್ಚುವರಿ ಬಸ್ ಬಿಡಲಾಗುವುದು. ದಸರಾ ಮಹೋತ್ಸವದಲ್ಲಿ ದೇವದರ್ಶಿನಿ, ಜಲದರ್ಶಿನಿ, ಗಿರದರ್ಶಿನಿ ಬಸ್‍ಗಳನ್ನು ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಗಳಿಂದ ಬಿಡಲಾಗುವುದು ಎಂದರು.

ಸೆ.21ರಿಂದ ದಸರಾ ಕ್ರೀಡೆ ಪಂದ್ಯಾವಳಿಗಳು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿಗಳು ಸೆ.21 ರಿಂದ 26ರ ವರೆಗೆ ನಡೆಯಲಿವೆ ಎಂದು ದಸರಾ ಕುಸ್ತಿ ಉಪಸಮಿತಿ ಕಾರ್ಯಧ್ಯಕ್ಷ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುಸ್ತಿ ಪಂದ್ಯಾವಳಿಗಳು ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 3.30ಕ್ಕೆ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆಯಾಗಲಿದೆ ಎಂದರು.

ಮೈಸೂರು ವಿಭಾಗ ಮಟ್ಟದ ಪುರುಷರ ಪಾಯಿಂಟ್ ಕುಸ್ತಿ, ನಾಡ. ಕುಸ್ತಿ ಪಂದ್ಯಾವಳಿಗಳನ್ನು ಆಯೋಜಿಸಲಾಗುವುದು. ಸೆ.23ರಂದು 9ನೆ ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾವಳಿ ಹಾಗೂ 24,25ರಂದು 35ನೆ ರಾಜ್ಯಮಟ್ಟದ ರಾಜ್ಯಮಟ್ಟದ ಪುರುಷರ ಮತ್ತು ಬಾಲಕರ ಕುಸ್ತಿ ಪಂದ್ಯಾವಳಿ ನಡೆಯಲಿವೆ.

Facebook Comments

Sri Raghav

Admin