ನನ್ನ ಮತ್ತು .ಪರಮೇಶ್ವರ್ ನಡುವೆ ಯಾವುದೇ ಭಿನ್ನಮತ ಇಲ್ಲ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ
CM-Siddaramaiah
ಸಂಗ್ರಹ ಚಿತ್ರ

ಬೆಂಗಳೂರು, ಸೆ.2-ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪರಮೇಶ್ವರ್ ದೆಹಲಿಗೆ ಹೋಗಿದ್ದರು. ಹಾಗಾಗಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ಸಮರ್ಥಿಸಿಕೊಂಡರು. ಆದರೆ ಪರಮೇಶ್ವರ್ ಅವರು ನಿನ್ನೆ ಬೆಂಗಳೂರಿನಲ್ಲೇ ಇದ್ದರು ಎಂದು ವರದಿಗಾರರು ಗಮನ ಸೆಳೆದಾಗ, ಪರಮೇಶ್ವರ್ ಅವರು ಬೆಂಗಳೂರಿನಲ್ಲಿರುವುದು ನನಗೆ ಗೊತ್ತಿಲ್ಲ. ಹಾಗಿದ್ದರೆ ಪರಮೇಶ್ವರ್ ಅವರನ್ನೇ ಕೇಳಿ.. ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದರು.

ನನ್ನ ಹಾಗೂ ಪರಮೇಶ್ವರ್ ನಡುವೆ ಯಾವುದೇ ಮುನಿಸೂ ಇಲ್ಲ, ಸಿಟ್ಟು ಇಲ್ಲ. ಎಲ್ಲರೂ ಒಟ್ಟಾಗಿಯೇ ಇದ್ದೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗೃಹ ಸಚಿವರಾಗಿ ನೇಮಕಗೊಂಡ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಚುನಾವಣೆ ವರ್ಷವಾಗಿರುವುದರಿಂದ ಕಾನೂನು ಸುವ್ಯವಸ್ಥೆಗೆ ಹೆಚ್ಚು ಗಮನಕೊಡಬೇಕಿದೆ. ದುರುದ್ದೇಶಪೂರ್ವಕವಾಗಿ ಪಟ್ಟಭದ್ರ ಹಿತಾಸಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸುತ್ತಿವೆ. ಈ ಬಗ್ಗೆ ಎಚ್ಚರವಾಗಿರಿ ಎಂದು ಸಿಎಂ ಸಲಹೆ ನೀಡಿದರು.

ಸಾರಿಗೆ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದಂತೆ ಗೃಹ ಖಾತೆಯಲ್ಲಿ ಕೆಲಸ ಮಾಡಿ ಎಂದು ರಾಮಲಿಂಗಾರೆಡ್ಡಿ ಅವರಿಗೆ ತಿಳಿಸಿದರು.
ಬಕ್ರೀದ್ ಹಬ್ಬಕ್ಕೆ ಚಾಮರಾಜಪೇಟೆಗೆ ಹೋಗಬೇಕಿತ್ತು. ಆದರೆ ಮಳೆ ಬಂದಿದ್ದರಿಂದ ಹೋಗಲು ಆಗಲಿಲ್ಲ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿದರು.

Facebook Comments

Sri Raghav

Admin