ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲು ರಸ್ತೆ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

ಗುಬ್ಬಿ, ಸೆ.2- ಹೇಮಾವತಿ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ ಚಲುವರಾಜು ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ನೀಡಬೇಕು ಮತ್ತು ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ಹೇಮಾವತಿ ನೀರನ್ನುಹರಿಸಬೇಕೆಂದು ಒತ್ತಾಯಿಸಿ ಹಸಿರು ಸೇನೆ ಮತ್ತು ರೈತ ಸಂಘದ ವತಿಯಿಂದ ರಸ್ತೆ ತಡೆ ನಡೆಸಲಾಯಿತು.
ಕೆರೆಗಳಿಗೆ ನೀರು ಹರಿಸುವುದು ಜಿಲ್ಲಾಢಳಿತದ ಕರ್ತವ್ಯವಾಗಿದೆ. ಅನಗತ್ಯವಾಗಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಜಲಾಶಯದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ಜಲಾಶಕ್ಕೆ ಒಳಹರಿವು ಹೆಚ್ಚಳವಾಗಿದೆ ಈ ಹಿನ್ನೆಲೆಯಲ್ಲಿ ಎಲ್ಲಾ ಕೆರೆಗಳಿಗೂ ಹೇಮಾವತಿ ನೀರನ್ನು ಹರಿಸುವತ್ತ ಜಿಲ್ಲಾಢಳಿತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರೈತ ಸಂಘದ ಕಾರ್ಯದರ್ಶಿ ವೆಂಕಟೇಗೌಡ ಮಾತನಾಡಿ, ಹೇಮಾವತಿ ನೀರಿನ ವಿಚಾರದಲ್ಲಿ ತಾಲೂಕಿನ ರೈತರ ನಿಲುವುಗಳನ್ನು ಪಡೆಯದೆ ಏಕಾ ಏಕಿ ನಿರ್ಧಾರವನ್ನು ಮಾಡಿರುವಂತಹದ್ದು ಖಂಡನೀಯ. ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.  ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಸಿ.ಕೆ.ಪ್ರಕಾಶ್, ಸಿ.ಜಿ.ಲೋಕೇಶ್, ಸಿ.ಟಿ.ಕುಮಾರ್, ವಿರೂಪಾಕ್ಷಪ್ಪ, ಚನ್ನಬಸಪ್ಪ ಸೇರಿದಂತೆ ಹಸಿರು ಸೇನೆ ಮತ್ತು ರೈತ ಸಂಘದ ಮುಖಂಡರು ಮತ್ತು ರೈತರು ಭಾಗವಹಿಸಿದ್ದರು.

Facebook Comments

Sri Raghav

Admin