ಲಂಕಾ ವಿರುದ್ಧ ಏಕದಿನ ಸರಣಿಯಲ್ಲೂ ಕ್ಲೀನ್ ಸ್ವೀಪ್‍ನತ್ತ ಭಾರತ

ಈ ಸುದ್ದಿಯನ್ನು ಶೇರ್ ಮಾಡಿ

Clean-Swipe

ಕೊಲಂಬೊ, ಸೆ.2- ಟೆಟ್ ಲ್ಲಿ ವೈಟ್‍ವಾಷ್ ಮಾಡಿರುವ ಭಾರತ ನಾಳೆ ನಡೆಯಲಿರುವ ಶ್ರೀಲಂಕಾ ವಿರುದ್ಧ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿ ಕ್ಲೀನ್‍ಸ್ವೀಪ್ ಮಾಡುವ ಹಂಬಲ ಹೊಂದಿದೆ.ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಕೊಹ್ಲಿ ಪಡೆ 4-0 ಅಂತರದಿಂದ ಮುನ್ನಡೆ ಸಾಧಿಸಿ ಸರಣಿ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಅಜೇಯ ಜಯ ಸಾಧಿಸಿ ಕ್ಲೀನ್ ಸ್ವೀಪ್‍ಗೆ ಸಜ್ಜಾಗಿದೆ.

2014ರ ನವೆಂಬರ್‍ನಲ್ಲಿ ಭಾರತದಲ್ಲಿ ನಡೆದ ದ್ವಿಪಕ್ಷೀಯ ಸರಣಿಯಲ್ಲಿ ಲಂಕಾ 5-0 ಅಂತರದಿಂದ ಸೋಲು ಅನುಭವಿಸಿತ್ತು. ಇತ್ತೀಚಿನ ದಿನಗಳಲ್ಲಿ ಲಂಕಾ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. 2019ರ ವಿಶ್ವಕಪ್‍ಗೆ ಅರ್ಹತೆ ಪಡೆಯಲು ಲಂಕಾ ತಂಡ ಭಾರತ ವಿರುದ್ಧ ಪಂದ್ಯದಲ್ಲಿ ಗೆಲ್ಲಬೇಕಿತ್ತು. ಆದರೆ ಸೋಲು ಅನುಭವಿಸಿದೆ.  2019ರ ವಿಶ್ವಕಪ್‍ಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ನಾಯಕ ಕೊಹ್ಲಿ ನೇತೃತ್ವದ ಯುವ ಪಡೆ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಾಯಕ ಕೊಹ್ಲಿ ಹಾಗೂ ರವಿಶಾಸ್ತ್ರಿ ಕಾಂಬಿನೇಷನ್ ಯಾವ ರೀತಿ ಫಲ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Facebook Comments

Sri Raghav

Admin