ಲಕ್ಷ್ಮಿ ಹೆಬ್ಬಾಳ್ಕರ್ ಗಡಿಪಾರಿಗೆ ವಾಟಾಳ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

vatal-nagraj

ಬೆಳಗಾವಿ, ಸೆ.2-ನಾಡದ್ರೋಹಿ ಹೇಳಿಕೆ ನೀಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡಬೇಕೆಂದು ಕನ್ನಡ ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‍ನಾಗರಾಜ್ ನೇತೃತ್ವದಲ್ಲಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ಕೆ.ಆರ್.ಕುಮಾರ್ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆ ನಡೆಸಿ ಲಕ್ಷ್ಮಿಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರ್ಪಡೆಯಾದರೆ ತಾವು ಜೈ ಮಹಾರಾಷ್ಟ್ರ ಎನ್ನುವುದಾಗಿ ನಾಡದ್ರೋಹಿ ಹೇಳಿಕೆ ನೀಡಿದ್ದ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ಹಿತಕ್ಕಾಗಿ ನಾಡದ್ರೋಹಿ ಮಾತುಗಳನ್ನಾಡುವ ಇಂಥವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ವಾಟಾಳ್ ಎಚ್ಚರಿಕೆ ನೀಡಿದರು. ಮಹಂತೇಶ್ ರಣಗಟ್ಟಿ ಮಠ, ಶ್ರೀನಿವಾಸ್ ತಾಲೂಳಕರ, ರಾಮಚಂದ್ರ ಡವಳಿ, ಕಸ್ತೂರಿ ಬಾವಿ ಸೇರಿದಂತೆ ನೂರಾರು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin